Friday, April 5, 2024

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ಚಾಲಕ ಸಾವು

ಬಂಟ್ವಾಳ: ಘನಗಾತ್ರದ ಲಾರಿಯೊಂದು ಚಲಿಸುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದು ರಸ್ತೆಗೆ ಅಡ್ಡಲಾಗಿ ಬಿದ್ದು, ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಕಲ್ಲಡ್ಕ ಸಮೀಪದ ಅಮ್ಟೂರು ಕ್ರಾಸ್ ಬಳಿ ಕೆ.ಸಿ.ರೋಡ್ ಎಂಬಲ್ಲಿ ಸಂಭವಿಸಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಘನಗಾತ್ರದ ಲಾರಿಯಲ್ಲಿ ಅಧಿಕ ಭಾರದ ಇಲೆಕ್ಟ್ರಿಕಲ್ ಸಂಬಂಧಿಸಿದ ವಯರ್ ಗಳನ್ನು (ಕ್ವಾಯಿಲ್) ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಚಲಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿದೆ. ಘಟನೆಯಲ್ಲಿ ನೆಲ್ಯಾಡಿ ನಿವಾಸಿ ಚಾಲಕ ಅಕ್ರಮ್ ಭಾಷಾ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡ ಅಕ್ರಮ್ ಅವರನ್ನು ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯ ಘಟನೆಗೆ ಕಾರಣವೆನ್ನಲಾಗಿದೆ.

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಠಾಣಾ ಪೋಲೀಸರು ಭೇಟಿ ನೀಡಿದ್ದಾರೆ.

More from the blog

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ವಿಟ್ಲ : ಮಹಿಳೆ ಆತ್ಮಹತ್ಯೆ

ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡು ನಿವಾಸಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿ.ರಾಮಣ್ಣ ನಾಯ್ಕ ಅವರ ಪತ್ನಿ ಸುಶೀಲಾ ಅವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.