Saturday, April 6, 2024

ರಸ್ತೆ ಅಪಘಾತ: ಮೂರು ದಿನದ ಹಸುಗೂಸು ಸಾವು

ಬಂಟ್ವಾಳ: ಆಟೋ ರಿಕ್ಷಾ ಉರುಳಿ ಬಿದ್ದು ೩ ದಿನದ ಹಸುಗೂಸು ಮೃತಪಟ್ಟ ಘಟನೆ ತಾಲೂಕಿನ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ನಡೆದಿದೆ.
ಗುರುಪುರ- ಕೈಕಂಬ ಮೂಲದ ಉಮೈರಾ ಎಂಬವರು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಬಿ,ಸಿ. ರೋಡ್ ಕಡೆ ಬರುವ ಖಾಲಿ ಆಂಬ್ಯುಲೆನ್ಸ್ ನಲ್ಲಿ ಬಿ.ಸಿ.ರೋಡ್- ಕೈಕಂಬದಲ್ಲಿ ಇಳಿದು ಅಲ್ಲಿಂದ ಗೂಡಿನಬಳಿ ನಿವಾಸಿಯೊರ್ವರ ಆಟೋ ರಿಕ್ಷಾದಲ್ಲಿ ಮನೆ ಕಡೆಗೆ ತೆರಳುವ ವೇಳೆ ಈ ಘಟನೆ ನಡೆದಿದೆ. ಆಟೋ ರಿಕ್ಷಾ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಈ ಘಟನೆಯಿಂದ ತಾಯಿಯ ಮಡಿಲಲ್ಲಿದ್ದ ಹಸುಗೂಸು ಹೊರಗೆಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದೆ. ಇನ್ನು ರಿಕ್ಷಾದಲ್ಲಿದ್ದ ಚಾಲಕ ಸಹಿತ ಇಬ್ಬರು ಮಹಿಳೆಯರು ಸಣ್ಣಪುಟ್ಟ ಗಾಯಗಳಾಗಿದ್ದು, ಬಿಸಿ ರೋಡಿನ ಖಾಸಗಿ ಆಸ್ಪತ್ರೆಗೆ ದಾಖಾಲಿಸಲಾಗಿದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...