Saturday, April 6, 2024

ಸಿದ್ಧಕಟ್ಟೆ ಸ.ಪ್ರ.ದ ಕಾಲೇಜು: ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನಾಚರಣೆ

ಬಂಟ್ವಾಳ: ತಾಲೂಕಿನ ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನಾಚರಣೆಯನ್ನು ನಿನ್ನೆ (ಡಿ.9) ಆಯೋಜಿಸಲಾಗಿತ್ತು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ನಸೀಮಾ ಬೇಗಂ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ, ಭ್ರಷ್ಟಾಚಾರದಿಂದಾಗುವ ಸಾಮಾಜಿಕ, ರಾಜಕೀಯ ನಷ್ಟಗಳ ಬಗ್ಗೆ ತಿಳಿ ಹೇಳಿ ಯುವಜನತೆ ಭ್ರಷ್ಟಾಚಾರ ವಿರೋಧಿ ಮನೋಭಾವನೆಯಿಂದ ಸಮಾಜದಲ್ಲಿ ಜಾಗೃತಿ ಮೂಡಿಸಿದರೆ ಮುಂದಿನ ದಿನಗಳಲ್ಲಿ ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣವಾಗಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಹೆಚ್.ಕೆ. ಮಾತನಾಡಿ, ಭ್ರಷ್ಟಾಚಾರದ ವಿವಿಧ ಕ್ಷೇತ್ರಗಳು ಅದರಿಂದಾಗುವ ಕೆಡುಕುಗಳನ್ನು ವಿವರಿಸಿ ಭ್ರಷ್ಟಾಚಾರದ ವಿರೋಧಿ ದಿನದ ಮಹತ್ವವನ್ನು ವಿವರಿಸಿ ವಿದ್ಯಾರ್ಥಿಗಳಲ್ಲಿ ಭ್ರಷ್ಟಾಚಾರ ನಿರ್ಮೂಲನದ ಬಗ್ಗೆ ಜಾಗೃತಿ ಮೂಡಿಸಿದರು. ಅದರ ಜೊತೆಗೆ ಭ್ರಷ್ಟಾಚಾರಕ್ಕೆ ಕಾರಣವಾಗುವ ವಿವಿಧ ಸನ್ನಿವೇಶಗಳು ಹಾಗೂ ಭ್ರಷ್ಟಾಚಾರದ ಪ್ರಭಾವವನ್ನು ತಗ್ಗಿಸಲು ಯುವ ಜನತೆಯು ಕೈಗೊಳ್ಳಬೇಕಾದ ವರ್ತನೆಯ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ತೃತೀಯ ಬಿ.ಎ.ತರಗತಿಯ ವಿದ್ಯಾರ್ಥಿನಿಯರಾದ ಲಕ್ಷ್ಮಿ ಸ್ವಾಗತಿಸಿ, ಜಾಹ್ನವಿ ವಂದಿಸಿದರು. ಶ್ರಾವ್ಯ ಕಾರ್ಯಕ್ರಮ ನಿರೂಪಿಸಿ, ಚೇತನ ಮತ್ತು ವಿಶಾಲಾಕ್ಷಿ ಪ್ರಾರ್ಥಿಸಿದರು.

 

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...