Wednesday, April 17, 2024

ಸಿಡಿಲು ಬಡಿದು ಸಾವು

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ತಾಲೂಕಿನ ಗಡಿ ಭಾಗವಾಗಿರುವ ಕರೋಪಾಡಿ ಗ್ರಾಮದ ಸಾರ್ಥಕೋಡಿ ಎಂಬಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ಚಂದಪ್ಪ ಮೂಲ್ಯ ಮೃತಪಟ್ಟವರು.
ರಾತ್ರಿಯ ಬಳಿಕ  ಗುಡುಗು ಸಿಡಿಲು ಇತ್ತು. ಈ ಸಂದರ್ಭ ಮನೆಗೆ ಸಿಡಿಲು ಬಡಿದಿದೆ, ಸುಮಾರು 12.30ರ ಬಳಿಕ ಘಟನೆ ನಡೆದಿದ್ದು, ಚಂದಪ್ಪ ಮೂಲ್ಯ ಅವರು ಸಿಡಿಲಾಘಾತದಿಂದ ತೀವ್ರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು  ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಇದೇ ಸಂದರ್ಭ ಮನೆಗೂ ಸಿಡಿಲಾಘಾತದಿಂದ ಹಾನಿಗಳುಂಟಾಗಿವೆ.  ವಿದ್ಯುತ್ ಉಪಕರಣಗಳು ಸುಟ್ಟುಹೋಗಿವೆ.

More from the blog

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...