Tuesday, October 17, 2023

ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಸದಸ್ಯರ ಸಹಿತ ಅನೇಕ ಕಾಂಗ್ರೇಸ್ ಕಾರ್ಯಕರ್ತರು ಬಿಜೆಪಿಗೆ

Must read

ಬಂಟ್ವಾಳ: ಬಂಟ್ವಾಳ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಸದಸ್ಯರ ಸಹಿತ ಅನೇಕ ಕಾಂಗ್ರೇಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಮಾಣಿ ಜಿ.ಪಂ ಸದಸ್ಯೆ ಮಂಜುಳಾ ಮಾದವ ಮಾವೆ, ಕನ್ಯಾನ ತಾ.ಪಂ ಸದಸ್ಯ ಕುಮಾರ್ ಭಟ್, ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದವರ್ಗಗಳ ಅಧ್ಯಕ್ಷ ಮಾದವ ಮಾವೆ ಇವರುಗಳು ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡರು.

ಬಿಜೆಪಿ ರಾಜ್ಯಧ್ಯಾಕ್ಷ ನಳಿನ್ ಕುಮಾರ್ ಕಟೀಲು, ದ.ಕ ಜಿಲ್ಲಾಧ್ಯಕ್ಷ ಸುದರ್ಶನ್, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಬಂಟ್ವಾಳ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿಯವರ ಸಮ್ಮುಖದಲ್ಲಿ ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

More articles

Latest article