Saturday, April 6, 2024

ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ 40 ಲಕ್ಷ ಲಾಭದಲ್ಲಿ: ಅಧ್ಯಕ್ಷ ಪದ್ಮನಾಭ ಬಿ.

ಬಂಟ್ವಾಳ: ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ 125 ಕೋಟಿ ವ್ಯವಹಾರ ನಡೆಸಿದ್ದು, 24 ಕೋಟಿ ಠೇವಣಿ ಹೊಂದಿದೆ.23.15 ಕೋಟಿ ಸಾಲ ನೀಡಲಾಗಿದ್ದು, 21.62 ಕೋಟಿ ಸಾಲ ಮರುಪಾವತಿ ಯಾಗಿದೆ.
40 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಪದ್ಮನಾಭ ಅವರು ಹೇಳಿದರು.
ಅವರು ಬಿಸಿರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆದ ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಿ.ಇದರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂದರ್ಭದಲ್ಲಿ ತಿಳಿಸಿದರು.

ಸಂಘ ಠೇವಣಿ ಗಳಿಗೆ ಆಕರ್ಷಕ ಬಡ್ಡಿದರ , ಹಿರಿಯನಾಗರಿಕರಿಗೆ ಶೇ.0.50 ಅಧಿಕ ಬಡ್ಡಿ, ಸ್ಪರ್ಧಾತ್ಮಕ ಬಡ್ಡಿದರದಲ್ಲಿ ಸದಸ್ಯರಿಗೆ ವಿವಿಧ ಸಾಲಗಳನ್ನು ನೀಡಲಾಗುತ್ತಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಅವರು ಮನವಿ ಮಾಡಿದರು.
ನಾನು ನಿನಗಾಗಿ ನೀನು ನನಗಾಗಿ ನಾವೆಲ್ಲರೂ ನಿಮಗಾಗಿ ಎಂಬ ತತ್ವದಡಿಯಲ್ಲಿ ಸಹಕಾರಿ ಸಂಘಗಳು ಕಾರ್ಯರೂಪಕ್ಕೆ ಬಂದಿವೆ.
ಅಮೂಲಕ ಸಾರ್ವಜನಿಕ ಸೇವೆಯಲ್ಲಿ ಮುಂದಡಿ ಇಟ್ಟಿದೆ.
ಬಂಟ್ವಾಳ ವ್ಯವಸಾಯ ಸೇವ ಸಹಕಾರಿ ಸಂಘ ಕೂಡ ಕೆಲಸ ಮಾಡುತ್ತಿದೆ.
ಈ ಸಂಘ ಸದಸ್ಯರ ಹಾಗೂ ಗ್ರಾಹಕರ ಉತ್ತಮ ಪ್ರೋತ್ಸಾಹ ಸಹಕಾರದಿಂದ ಸದೃಡವಾಗಿದ್ದು ಜನರ ಅನುಕೂಲಕ್ಕೆ ಅನುಗುಣವಾಗಿ ಸಾಲದ ತಿದ್ದುಪಡಿ ಮಾಡಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.
ಮಹಾಸಭೆಯ ಲ್ಲಿ ಸಂಘದ ಮಾಜಿ ಅಧ್ಯಕ್ಷ ಜಿ.ಆನಂದ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಸಂಘದ ಉಪಾಧ್ಯಕ್ಷ ಕೆ.ಭವಾನಿಶಂಕರ್ ಅವರು ಜಿ.ಅನಂದ ಅವರ ಬಗ್ಗೆ ನುಡಿನಮನ ಸಲ್ಲಿಸಿದರು.
ಮಹಾಸಭೆಯಲ್ಲಿ ನಿರ್ದೇಶಕ ರುಗಳಾದ ಎಂ.ಮಹಾಬಲ ಶೆಟ್ಟಿ, ರಾಮಚಂದ್ರ ಗೌಡ, ವಿಠಲಪೂಜಾರಿ ಪುಂಡಿಬೈಲು, ವಿದ್ಯಾವತಿ ಪ್ರಮೋದ್ ಕುಮಾರ್, ಎಂ.ಕರುಣೇಂದ್ರ ಪೂಜಾರಿ, ಎ.ಲಕ್ಮೀ ವಿ.ಪ್ರಭು, ಹರೀಶ್ ಬಿ.ಸದಾಶಿವ ಶೆಣೈ, ಮನೋಹರ ಮೂಲ್ಯ, ಕೆ.ಪ್ರಕಾಶ್ ,ಕೆ.ಎನ್. ಶೇಖರ್ ಉಪಸ್ಥಿತರಿದ್ದರು.
ಸಂಘ ದ ಅಧ್ಯಕ್ಷ ಪದ್ಮನಾಭ ಬಿ.ಅವರು ಸ್ವಾಗತಿಸಿದರು.
ಮುಖ್ಯಕಾರ್ಯನಿರ್ವಾಹಣಾಧಿಕಾರಿ ಜಯಪ್ರಕಾಶ್ ಕಾಮತ್ ಅವರು ವಾರ್ಷಿಕ ವರದಿ ವಾಚಿಸಿದರು.
ಲೆಕ್ಕಪಾಲೆ ನತಾಶ ವಂದಿಸಿದರು.

ನಾವೂರ ಬ್ಯಾಂಕ್ ಮ್ಯಾನೇಜರ್ ಹರೀಶ್ ಕಾಮಾಜೆ ಕಾರ್ಯಕ್ರಮ ನಿರೂಪಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...