Saturday, April 13, 2024

ಬಂಟ್ವಾಳ ಅರಣ್ಯ ಅಧಿಕಾರಿಗಳಿಂದ ಚಿಪ್ಪು ಹಂದಿಯ ರಕ್ಷಣೆ

ಬಂಟ್ವಾಳ: ಅಪರೂಪದ ಪ್ರಾಣಿಯೊಂದನ್ನು ಹಿಡಿದು ಸುರಕ್ಷಿತವಾಗಿ ರಕ್ಷಿತಾರಣ್ಯಕ್ಕೆ ಬಿಡುವಲ್ಲಿ ಬಂಟ್ವಾಳ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ಕೃಷ್ಣಕೋಡಿ ಎಂಬಲ್ಲಿ ಪುರುಷೋತ್ತಮ ಎಂಬವರ ಮನೆಯ ಪಕ್ಕದ ತೋಟದಲ್ಲಿ ಅಪರೂಪದ ಪ್ರಾಣಿಯಾದ ಚಿಪ್ಪುಹಂದಿ ಕಂಡು ಬಂದಿದ್ದು, ಅದನ್ನು ರಕ್ಷಣೆ ಮಾಡಲಾಗಿದೆ.

ಚಿಪ್ಪು ಹಂದಿ ಇರುವುದರ ಬಗ್ಗೆ ಪುರುಷೋತ್ತಮ ಅವರು ಬಂಟ್ವಾಳ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಬಂಟ್ವಾಳ ಅರಣ್ಯ ಇಲಾಖೆಯ ಅಧಿಕಾರಿ ಸಹಿತ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಚಿಪ್ಪು ಹಂದಿಯನ್ನು ಸುರಕ್ಷಿತವಾಗಿ ಹಿಡಿದು ಬಳಿಕ ರಕ್ಷಿತಾರಣ್ಯಕ್ಕೆ ಬಿಡುವಲ್ಲಿ ಯಶಸ್ಬಿಯಾಗಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಉಪವಲಯ ಅರಣ್ಯಾಧಿಕಾರಿ ಪ್ರೀತಂ ಎಸ್., ಯಶೋಧರ, ಅರಣ್ಯ ರಕ್ಷಕರಾದ ಜಿತೇಶ್ ಮತ್ತು ರೇಖಾ ಭಾಗವಹಿಸಿದ್ದರು.

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...