Wednesday, April 17, 2024

ಇಂದಿರಾ ಶೆಟ್ಟಿ ಅವರ 2 ಕೃತಿಗಳ ಬಿಡುಗಡೆ

ಇಂದಿರಾ ಶೆಟ್ಟಿ ಮೈಸೂರು ಅವರು ಬರೆದ “ಇರುವುದೆಲ್ಲವ ಬಿಟ್ಟು” ನಾಟಕ ಸಂಕಲನ ಹಾಗೂ “ಭಾವ ಚಿತ್ತಾರ” ಕವನ ಸಂಕಲನ ಇದೇ ತಿಂಗಳ 16 ರಂದು ಬೆಳಗ್ಗೆ ಹನ್ನೊಂದು ಗಂಟೆಗೆ ಮೈಸೂರಿನ ಪತ್ರಿಕಾಭವನದಲ್ಲಿ ಲೋಕಾರ್ಪಣೆಗೊಳ್ಳಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ,ಸಾಹಿತಿ ಡಾ. ಮಾಲತಿ ಶೆಟ್ಟಿ ಮಾಣೂರು ವಹಿಸುವರು. ಭಾವ ಚಿತ್ತಾರ ಕವನ ಸಂಕಲನವನ್ನು ಖ್ಯಾತ ಕವಿ ಡಾ. ಜಯಪ್ಪ ಹೊನ್ನಾಳಿ ಮೈಸೂರು ಬಿಡುಗಡೆಗೊಳಿಸುವರು .ಇರುವುದೆಲ್ಲವ ಬಿಟ್ಟು ನಾಟಕ ಸಂಕಲನವನ್ನು ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರೂ ಖ್ಯಾತ ಕವಿಗಳೂ ಆದ ಡಾ ಭೇರ್ಯ ರಾಮ್ ಕುಮಾರ್ ಅವರು ಬಿಡುಗಡೆಗೊಳಿಸುವರು . ಸಾಹಿತಿ , ಚಲನಚಿತ್ರ ನಟ ಡಾ .ಕಾಸರಗೋಡು ಅಶೋಕ್ ಕುಮಾರ್ ಮುಖ್ಯ ಅತಿಥಿಯಾಗಿರುವರು .ಈ ಸಂದರ್ಭದಲ್ಲಿ ಲೇಖಕಿ ,ಕವಯಿತ್ರಿ ಇಂದಿರಾ ಶೆಟ್ಟಿ ಮೈಸೂರು ಉಪಸ್ಥಿತರಿರುವರು.

More from the blog

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...