ಬೆಂಗಳೂರು:ತೀವ್ರ ಆತಂಕಕ್ಕೆ ಕಾರಣವಾಗಿರುವ ರೂಪಾಂತರಿ ಕೊರೊನಾ ವೈರಸ್ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದು, ಬೆಂಗಳೂರಿನ ಮೂವರಿಗೆ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.



ಕೇಂದ್ರ ಆರೋಗ್ಯ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು, ಬ್ರಿಟನ್ ನಿಂದ ಭಾರತಕ್ಕೆ ಬಂದ 6 ಮಂದಿಯಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಈ ಪೈಕಿ ಹೈದರಾಬಾದ್ ನ ಇಬ್ಬರು, ಪುಣೆಯ ಒಬ್ಬರು ಹಾಗೂ ಬೆಂಗಳೂರಿನ ಮೂವರಿಗೆ ರೂಪಾಂತರಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇಂದು ಸಂಜೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.
ಒಟ್ಟಾರೆಯಾಗಿ ತೀವ್ರ ಆತಂಕ ಸೃಷ್ಠಿಸಿದ್ದಂತ ಬ್ರಿಟನ್ ವೈರಸ್ ರಾಜ್ಯಕ್ಕೂ ಕಾಲಿಟ್ಟಿದೆ. ಬೆಂಗಳೂರಿನ ಮೂವರಿಗೆ ಕೊರೋನಾ ರೂಪಾಂತರಿ ವೈರಸ್ ದೃಢಪಟ್ಟಿದ್ದು, ರಾಜ್ಯಕ್ಕೆ ಮೂವರೇ ಕಂಟವಾಗುವ ಸಾಧ್ಯತೆ ಇದೆ. ಸೋ ರಾಜ್ಯದ ಜನರು ಇನ್ಮುಂದೆ ಎಚ್ಚರಿಕೆ ವಹಿಸಬೇಕಿದೆ. ಕೊರೋನಾ ಸೋಂಕು ನಿಯಂತ್ರಣದ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ.