Thursday, October 19, 2023

ಧರ್ಮಸ್ಥಳದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಏಪ್ರಿಲ್ 29 ಕ್ಕೆ

Must read

ಧರ್ಮಸ್ಥಳ: ಧರ್ಮಸ್ಥಳಲ್ಲಿ ಏಪ್ರಿಲ್ 29, ಗುರುವಾರದಂದು ಸಂಜೆ 6.48ಕ್ಕೆ ಗೋಧೋಳಿ ಲಗ್ನದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.
​ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು.
​ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈತನಕ ಒಟ್ಟು 12,262 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.
​ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 25ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, 8147263422, 9663464648.

More articles

Latest article