Saturday, April 20, 2024

ಹಳ್ಳಿ ಸಮರಕ್ಕೆ ” ಜೈ ” ಎಂದ ಮತದಾರಪ್ರಭು…….

ಬಂಟ್ವಾಳ : ತಾಲೂಕಿನಾದ್ಯಂತ ಗ್ರಾಮಪಂಚಾಯತ್ ಚುನಾವಣೆ ಬಿರುಸಿನಿಂದ ನಡೆಯುತ್ತಿದ್ದು, ಬೆಳಗ್ಗೆ ನಿಂದಲೇ ಗ್ರಾಮೀಣ ಮತದಾರರು ಉತ್ಸಾಹದಿಂದ ಮತಚಲಾಯಿಸಿದರು. ಬೆಳಗ್ಗೆ 7 ಗಂಟೆಯಿಂದ ಯಾವುದೇ ಗೊಂದಲಗಳಿಲ್ಲದೆ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಮಹಿಳಾ ಮತದಾರರು ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.


ಮತಕೇಂದ್ರಗಳ ಮುಂಭಾಗದಲ್ಲಿ ಅಭ್ಯರ್ಥಿಗಳ ಪರವಾಗಿ ವಿವಿಧ ಪಕ್ಷಗಳ ಕಾರ್ಯಕರ್ತರು ಮತಯಾಚಿಸುತ್ತಿದ್ದ ಸನ್ನಿವೇಶ ಸಾಮಾನ್ಯವಾಗಿ ಕಂಡುಬಂತು.


ಅಶಕ್ತ ವಯೋವೃದ್ಧರು ಹಾಗೂ ಹಿರಿಯ ನಾಗರಿಕರನ್ನು ವಾಹನಗಳಲ್ಲಿ ಮತಗಟ್ಟೆಗಳಿಗೆ ಕರೆದುಕೊಂಡು ಬಂದು ಮತದಾನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತಿದ್ದ ದೃಶ್ಯಗಳು ಕಂಡು ಬಂತು.

ಶಾಸಕ ರಾಜೇಶ್ ನಾಯ್ಕ್ ಹಾಗೂ ಮಾಜಿ ಸಚಿವ ಬಿ.ರಮಾನಾಥ ರೈ ಗ್ರಾಮಪಂಚಾಯತ್ ವ್ಯಾಪ್ತಿಗೆ ಭೇಟಿ ನೀಡಿ ತಮ್ಮ‌ ಪಕ್ಷ ಬೆಂಬಲಿತ ಅಭ್ಯರ್ಥಿಗಳ ಪರವಾಗಿದ್ದ ಕಾರ್ಯಕರ್ತರನ್ನು ಉತ್ತೇಜನ‌ ನೀಡುತ್ತಿದ್ದರು.

ಆರೆಸ್ಸೆಸ್ ಮುಖಂಡ ಡಾ.ಪ್ರಭಾಕರ ಭಟ್ ದಂಪತಿ ಕಲ್ಲಡ್ಕ ಶಾಲೆಯ ಮತಗಟ್ಟೆಯಲ್ಲಿ ಮತಯಾಚಿಸಿದರು.

ನಗ್ರಿ ಶಾಲೆಯ ಮತಗಟ್ಟೆಯಲ್ಲಿ ಸಿಬ್ಬಂದಿಯೊಬ್ಬರ ಎಡವಟ್ಟಿನಿಂದ ಕೆಲ ಮತದಾರರ ಬಲಗೈ ಹೆಬ್ಬೆರಳಿಗೆ ಶಾಯಿಗುರುತು ಹಾಕಿದ್ದು ಚರ್ಚೆಗೆ ಗ್ರಾಸವಾಯಿತು. ಉಳಿದಂತೆ ಯಾವುದೇ ಗೊಂದಲಗಳಿಲ್ಲದೆ ಶಾಂತಿಯುತವಾಗಿ ಚುನಾವಣಾ ಪ್ರಕ್ರಿಯೆ ನಡೆಯುತ್ತಿದೆ.

More from the blog

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ...

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...