Friday, April 5, 2024

ಮತ ಎಣಿಕೆ ಸಂದರ್ಭ ನಿಯಮ ಪಾಲನೆ ಕಡ್ಡಾಯ: ಅಭ್ಯರ್ಥಿ, ಏಜಂಟರಿಗೆ ತಹಸೀಲ್ದಾರ್ ಕಟ್ಟುನಿಟ್ಟಿನ ಸೂಚನೆ

ಬಂಟ್ವಾಳ: ಮತ ಎಣಿಕೆ ಸಂದರ್ಭ ಎಣಿಕೆ ಕೇಂದ್ರದಲ್ಲಿ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅಭ್ಯರ್ಥಿಗಳಿಗೆ ಹಾಗೂ ಏಜಂಟರಿಗೆ ಬಂಟ್ವಾಳ ತಹಸೀಲ್ದಾರ್ ಅನಿತಾಲಕ್ಷ್ಮೀ ಸೂಚಿಸಿದ್ದಾರೆ. ಮತ ಎಣಿಕೆ ಕೊಠಡಿಯೊಳಗೆ ಅಭ್ಯರ್ಥಿ ಅಥವಾ ಒಬ್ಬ ಏಜೆಂಟರಿಗೆ ಮಾತ್ರ ಅವಕಾಶ . ಚುನಾವಣಾಧಿಕಾರಿ ಸಹಿ ಉಳ್ಳ ಭಾವಚಿತ್ರದ ಸಮೇತ ನೀಡಿರುವ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರತಕ್ಕದ್ದು. ಅವಶ್ಯವಿದ್ದಲ್ಲಿ ಸಂಬಂಧಪಟ್ಟವರಿಗೆ ತೋರಿಸತಕ್ಕದ್ದು ಮೊಬೈಲ್ ಫೋನ್ ಹಾಗೂ ತತ್ಸಮಾನ ಸ್ಮಾರ್ಟ್ ವಾಚ್, ಯಾವುದೇ ಮಾರಕ ಆಯುಧಗಳನ್ನು ಮತ ಎಣಿಕೆ ಕೇಂದ್ರದ ಒಳಗೆ ತರಲು ನಿಷೇಧಿಸಲಾಗಿದೆ. ಒಮ್ಮೆ ಎಣಿಕೆ ಕೇಂದ್ರಕ್ಕೆ ಪ್ರವೇಶಿಸಿದ ನಂತರ ಹೊರಗೆ ಹೋದರೆ ಮರು ಪ್ರವೇಶಕ್ಕೆ ಅವಕಾಶವಿಲ್ಲ. ಎಣಿಕೆ ಕೇಂದ್ರದಲ್ಲಿ ಕೊಠಡಿಯ ಒಳಗೆ ಆ ಕ್ಷೇತ್ರದ ಅಭ್ಯರ್ಥಿಯ ಅಥವಾ ಏಜೆಂಟ್ ಮಾತ್ರ ಪ್ರವೇಶಿಸಬೇಕು. ಎಣಿಕೆ ನಂತರ ಎಲ್ಲರೂ ಎಣಿಕೆ ಕೊಠಡಿಯಿಂದ ಹೊರಗೆ ಬರಬೇಕು ಮತ್ತು ವಿಜೇತ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಎಲ್ಲರೂ ಎಣಿಕೆ ಕೇಂದ್ರವನ್ನು ಕೂಡಲೇ ತೊರೆಯತಕ್ಕದ್ದು. ವಿಜೇತ ಅಭ್ಯರ್ಥಿಗಳಿಗೆ ಪಂಚಾಯತುವಾರು ಚುನಾವಣಾಧಿಕಾರಿಗಳು ಪ್ರಮಾಣ ಪತ್ರವನ್ನು ನೀಡುತ್ತಾರೆ ಎಂದು ತಹಸೀಲ್ದಾರ್ ತಿಳಿಸಿದ್ದಾರೆ. ಚುನಾವಣಾ ಎಣಿಕೆ ಕೇಂದ್ರದ ಒಳಗೆ ಮತ್ತು 500 ಮೀಟರ್ ಅಂತರದಲ್ಲಿ ಯಾವುದೇ ವಿಜಯೋತ್ಸವ ಹಾಗೂ ಸಂಭ್ರಮಾಚರಣೆಗೆ ನಿಷೇಧಿಸಲಾಗಿದೆ. ಸರಕಾರದ ಮಾರ್ಗಸೂಚಿಯನ್ವಯ ಕೋವಿಡ್ ನಿಯಮಾವಳಿಯನ್ನು ಕಡ್ಡಾಯ ಪಾಲಿಸಬೇಕು. ನಿಯಮವನ್ನು ಪಾಲಿಸದಿದ್ದಲ್ಲಿ ಅಂತಹ ವ್ಯಕ್ತಿಯ ಮೇಲೆ ಮೊಕದ್ದಮೆ ದಾಖಲಿಸಲಾಗುವುದು, ಹಾಗೂ ಎಣಿಕೆ ಕೇಂದ್ರದಿಂದ ಹೊರಕ್ಕೆ ಹಾಕಲಾಗುವುದು ಎಂಬ ಕಟ್ಟುನಿಟ್ಟಿನ ಸೂಚನೆಯನ್ನು ಅವರು ವಿಧಿಸಿದ್ದಾರೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...