Tuesday, October 17, 2023

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ -೨೦೨೦ : ಚುನಾವಣಾ ಆಯೋಗದ ನಿಯಮಗಳೇನು?

Must read

 

ಬಂಟ್ವಾಳ: ಗ್ರಾಮ ಪಂಚಾಯತ್ ಚುನಾವಣೆಗಳು ಪಕ್ಷರಹಿತ ಚುನಾವಣೆಯಾಗಿದ್ದು, ರಾಜಕೀಯ ಪಕ್ಷಗಳು ಈ ಚುನಾವಣೆಯಲ್ಲಿಯೂ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವ ಸಭೆ ಸಮಾರಂಭಗಳನ್ನು ನಡೆಸುವ , ರಾಜಕೀಯ ಮುಖಂಡರುಗಳ ಭಾವಚಿತ್ರಗಳನ್ನು ಕರ ಪತ್ರ ಗಳಲ್ಲಿ ಮುದ್ರಿಸಿ ಪಕ್ಷಗಳ ಬಾವುಟ ಮತ್ತು ಚಿಹ್ನೆಯನ್ನು ಬಳಸಿಕೊಂಡು ಪ್ರಚಾರ ಮಾಡುವ ಸಂಭವ ಇರುತ್ತದೆ.
ಅ ನಿಟ್ಟಿನಲ್ಲಿ
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ , ೧೯೯೩ರ ಪ್ರಕರಣ ೭(೨) ರಂತೆ ಗ್ರಾಮ ಪಂಚಾಯತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ.

ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳಿಗೆ ಹಾಗೂ ಸ್ಪರ್ಧಾಳುಗಳಿಗೆ ಕಾನೂನು ಉಲ್ಲಂಘನೆಯಾಗದಂತೆ ಯಾವ ಯಾವ ಅಂಶಗಳನ್ನು ಒಳಗೊಂಡಿದೆ ಎಂಬುದರ ವಿವಿರ ಇಲ್ಲಿದೆ.

೧. ರಾಜಕೀಯ ಪಕ್ಷಗಳು ಸಭೆ , ಸಮಾರಂಭಗಳನ್ನು ಏರ್ಪಡಿಸಿ , ವೇದಿಕೆಯ ಮೇಲೆ ಪಕ್ಷದ ಬಾವುಟ , ಬ್ಯಾನರ್ ಗಳನ್ನು ಬಳಸುವಂತಿಲ್ಲ .

೨. ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ.

೩. ಚುನಾವಣೆ ಸ್ಪರ್ಧಿಸಿರುವ ಅಭ್ಯರ್ಥಿಗಳು ರಾಜಕೀಯ ಮುಖಂಡರ ಭಾವಚಿತ್ರ/ ಪಕ್ಷದ ಚಿಹ್ನೆ ಇರುವ ಕರಪತ್ರಗಳನ್ನು ಮುದ್ರಿಸುವುದು/ ಹಂಚುವುದು ಮಾಡುವಂತಿಲ್ಲ.

೪. ರಾಜಕೀಯ ಮುಖಂಡರ ಭಾವಚಿತ್ರ ರಾಜಕೀಯ ಪಕ್ಷದ ಚಿಹ್ನೆ ಇರುವ ಕರಪತ್ರಗಳು , ಕಟೌಟ್ ಗಳು, , ಬ್ಯಾನರ್ ಮತ್ತು ಬಂಟಿಂಗ್ ಗಳ ಮೂಲಕ ಪ್ರಚಾರ ಮಾಡುವಂತಿಲ್ಲ.

೫. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಟಿ.ವಿ ಮಾಧ್ಯಮಗಳು, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಗಳನ್ನು ಬಳಸಿ ಜಾಹಿರಾತು ನೀಡುವಂತಿಲ್ಲ.

ಮೇಲೆ ತಿಳಿಸಿರುವ ಪ್ರಕರಣಗಳು ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಉಲ್ಲಂಘನೆಯಾಗಿರುವುದು ಕಂಡು ಬಂದಲ್ಲಿ ಅಂತಹ ಚುನಾವಣೆ ಪ್ರಚಾರ ಸಾಮಾಗ್ರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಅಂತವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ಅಧೀನ ಕಾರ್ಯದರ್ಶಿ ತಿಳಿಸಿರುತ್ತಾರೆ.

More articles

Latest article