Friday, April 5, 2024

ಮಸ್ಟರಿಂಗ್ ಡಿ’ ಮಸ್ಟರಿಂಗ್ ಮತ ಎಣಿಕೆ ಕೇಂದ್ರ ಹಾಗೂ ಭದ್ರತಾ ಕೊಠಡಿ ಸಿದ್ದತೆ ಪರಿಶೀಲನೆ

ಬಂಟ್ವಾಳ: ಗ್ರಾಮ ಪಂಚಾಯತ್ ಚುನಾವಣೆ ಇದೇ ದಿನಾಂಕ ೨೨ ಹಾಗೂ ಮತ ಎಣಿಕೆ ಕಾರ್ಯ ದಿನಾಂಕ ೩೦ ರಂದು ನಡೆಯಲಿದ್ದು. ಮೊಡಂಕಾಪು ಇನ್ಫೆಂಟ್ ಜೀಸಸ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯಲ್ಲಿರುವ ಮಸ್ಟರಿಂಗ್ ಡಿ’ ಮಸ್ಟರಿಂಗ್

ಮತ ಎಣಿಕೆ ಕೇಂದ್ರ ಹಾಗೂ ಭದ್ರತಾ ಕೊಠಡಿಗೆ ಬೇಟಿ ನೀಡಿ ಮತ ಎಣಿಕೆ ಕೇಂದ್ರ ಹಾಗೂ ಸ್ಟ್ರಾಂಗ್ ರೂಂ ನಿರ್ಮಾಣ ಹಾಗೂ ಭದ್ರತೆ ಸೇರಿದಂತೆ ಇನ್ನಿತರ ವ್ಯವಸ್ಥೆಯನ್ನು
ಶುಕ್ರವಾರ ಚುನಾವಣಾ ವೀಕ್ಷಕರಾದ ಶಾಂತರಾಜು ವೈ.ಬಿ (ಎಸ್ಟೇಟ್ ಆಪೀಸರ್ ಬಿ.ಡಿ.ಎ ಬೆಂಗಳೂರು) ಇವರು ವೀಕ್ಷಿಸಿ
ಚುಣಾವಣಾ ಶಿರಸ್ತೇದಾರ್ ರಾಜೇಶ್ ನಾಯ್ಕ್ ರವರಿಂದ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಚುನಾವಣೆ ಪ್ರಥಮ ದರ್ಜೆ ಸಹಾಯಕರಾದ ರಾಜ್ ಕುಮಾರ್,ಕಾರ್ತಿಕ್, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ ಸಿಬ್ಬಂದಿ ಸದಾಶಿವ ಕೈಕಂಬ,ಶೀತಲ್ ಉಪಸ್ಥಿತರಿದ್ದರು.

More from the blog

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...