Saturday, April 13, 2024

ಡಿ.22 ಗ್ರಾಮ ಪಂಚಾಯತ್ ಚುನಾವಣೆ: 15 ಮಂದಿ ಅವಿರೋಧವಾಗಿ ಆಯ್ಕೆ, 550 ಮಂದಿ ಹಿಂದಕ್ಕೆ 57 ಗ್ರಾ.ಪಂ ಗಳ 822 ಸ್ಥಾನ ಗಳಿಗೆ 1925 ಮಂದಿ ಕಣದಲ್ಲಿ

ಬಂಟ್ವಾಳ: ಡಿ.22. ರಂದು ನಡೆಯಲಿರುವ ಗ್ರಾಮಪಂಚಾಯತ್ ಚುನಾವಣೆ ನಾಮಪತ್ರ ಸಲ್ಲಿಕೆ, ಪರಿಶೀಲನೆ ಹಾಗೂ ಹಿಂತೆಗೆತದ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಅಂತಿಮವಾಗಿ ತಾಲೂಕಿನ 57 ಗ್ರಾಮಪಂಚಾಯತ್ ಗಳಲ್ಲಿ 822 ಸ್ಥಾನಗಳಿಗೆ 1925 ಮಂದಿ ಕಣದಲ್ಲಿದ್ದಾರೆ. ಸೋಮವಾರ 550 ಮಂದಿ ಉಮೇದುವಾರಿಕೆಯನ್ನು ಹಿಂಪಡೆದಿದ್ದು, ಒಟ್ಟು 15 ಮಂದಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಹೀಗಾಗಿ 57 ಗ್ರಾಪಂಗಳ 837ರಲ್ಲಿ 822 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆಯಬೇಕಾಗಿದೆ.

ಅವಿರೋಧ ಆಯ್ಕೆ
ತಾಲೂಕಿನ ಇಡ್ಕಿದುವಿನಲ್ಲಿ 4 ಮಂದಿ ಅವಿರೋಧವಾಗಿ ಆಯ್ಕೆಗೊಂಡರೆ, ಪುಣಚ ಮತ್ತು ವಿಟ್ಲಪಡ್ನೂರಿನಲ್ಲಿ ತಲಾ 2 ಮಂದಿ ಅವಿರೋಧವಾಗಿ ಆಯ್ಕೆಗೊಂಡರು. ಅಮ್ಟಾಡಿ, ಕರಿಯಂಗಳ, ಅಮ್ಮುಂಜೆ, ಮೇರಮಜಲು, ತುಂಬೆ, ಬಾಳ್ತಿಲ, ಫಜೀರು ಗ್ರಾಪಂಗಳಲ್ಲಿ ತಲಾ 1 ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸೋಮವಾರ ಕನ್ಯಾನ ಗ್ರಾಪಂನಲ್ಲಿ 40 ಮಂದಿ ಉಮೇದುವಾರಿಕೆಯನ್ನು ಹಿಂಪಡೆದಿದ್ದರು. ಕಣದಲ್ಲಿ ಉಳಿದಿರುವ ಸ್ಪರ್ಧಾ ಅಭ್ಯರ್ಥಿಗಳ ವಿವರ ಖಚಿತವಾಗುತ್ತಿದ್ದಂತೆಯೇ, ಆಯಾ ಗ್ರಾಮಪಂಚಾಯತ್ ವ್ಯಾಪ್ತಿಯ ಚುನಾವಣಾಧಿಕಾರಿಗಳು ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ವಿತರಿಸಿದ್ದಾರೆ. ಇದರ ಬೆನ್ನಲ್ಲೇ ಗ್ರಾಮೀಣ ಪ್ರದೇಶಗಳಲ್ಲಿ ಚುನಾವಣಾ ಪ್ರಚಾರ ಕಾರ್ಯ ಆರಂಭಗೊಂಡಿದ್ದು, ಇನ್ನೆರಡು ದಿನಗಳಲ್ಲಿ ಮತ್ತಷ್ಟು ಬಿರುಸುಪಡೆಯುವ ಸಾಧ್ಯತೆ ಇದೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...