Wednesday, April 17, 2024

ಹಿಟ್ ಎಂಡ್ ರನ್ ಗೆ ಬೈಕ್ ಸವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ಬಂಟ್ವಾಳದ ವೆಂಕಟರಮಣ ಹೊಳ್ಳ ನಿಧನ

ಬಂಟ್ವಾಳ: ಹಿಟ್ ಎಂಡ್ ರನ್ ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ದ ಪ್ರಮುಖ ಮೃತಪಟ್ಟ ಘಟನೆ ಇಂದು ಮುಂಜಾನೆ ವೇಳೆ ಪುತ್ತೂರಿನಲ್ಲಿ ನಡೆದಿದೆ.
ಬೈಕ್ ಸವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಮಂಗಳೂರು ವಿಭಾಗ ಗ್ರಾಮ ವಿಕಾಸ ಪ್ರಮುಖರಾದ ಬಂಟ್ವಾಳ ನಿವಾಸಿ ವೆಂಕಟ್ರಮಣ ಹೊಳ್ಳ ಮೃತಪಟ್ಟಿದ್ದಾರೆ.
ಬೈಕ್ ಸವಾರ ವೆಂಕಟರಮಣ ಹೊಳ್ಳ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಸಮೀಪದ ಪೋಳ್ಯ ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಡಿ.15ರ ನಸುಕಿನ ಜಾವದಲ್ಲಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ವೆಂಕಟ್ರಮಣ ಹೊಳ್ಳ ಅವರು ಸುಳ್ಯ ನಡೆದ ಕಾರ್ಯಕ್ರಮವೊಂದರಲ್ಲಿ ಸೋಮವಾರ ಭಾಗವಹಿಸಿ ಹಿಂತಿರುಗುವ ವೇಳೆ ತಡವಾದ್ದರಿಂದ ಪುತ್ತೂರಿನಲ್ಲಿ ತಂಗಿದ್ದರು. ಇಂದು ಮುಂಜಾನೆ ವೇಳೆ ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಕಬಕ ಸಮೀಪದ ಪೋಳ್ಯದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಹೊಳ್ಳ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸರಳ ಸಜ್ಜನಿಕೆಯ ವ್ಯಕ್ತಿತ್ವದ ಹೊಳ್ಳ ಅವರು ಅವಿವಾಹಿತ ರಾಗಿದ್ದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕಾಗಿಯೇ ತನ್ನ ಇಡೀ ಜೀವನವನ್ನು ಮುಡಿಪಾಗಿಟ್ಟ ಇವರು ಕಾಲಿಗೆ ಚಪ್ಪಲಿ ಕೂಡ ಹಾಕುತ್ತಿರಲಿಲ್ಲ.
ಅನೇಕ ನಾಯಕರುಗಳಿಗೆ ಮಾರ್ಗದರ್ಶಕರಾಗಿದ್ದ ಇವರ ಅಕಾಲಿಕ ಮರಣ ರಾಷ್ಟ್ರೀಯ ಸ್ವಯಂಸೇವಕ ಸಂಘ ಕ್ಕೆ ತುಂಬಲಾರದ ನಷ್ಟ ವಾಗಿದೆ.
ಇವರ ಅಕಾಲಿಕ ಮರಣ ಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಕಲ್ಲಡ್ಕ ಡಾ| ಪ್ರಭಾಕರ ಭಟ್, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಸಂಜೀವ ಮಠಂದೂರು, ಹರೀಶ್ ಪೂಂಜ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಸಹಿತ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಘಟನಾ ಸ್ಥಳಕ್ಕೆ ಪುತ್ತೂರು ಟ್ರಾಫಿಕ್ ಎಸ್.ಐ ರಾಮನಾಯ್ಕ್ ಅವರು ಬೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಿಟ್ ಎಂಡ್ ರನ್ ಮಾಡಿದ ವಾಹನದ ಬಗ್ಗೆ ಸಿ.ಸಿ.ಕ್ಯಾಮರಾ ಪೂಟೇಜ್ ನಲ್ಲಿ ಮಾಹಿತಿ ಕಲೆಹಾಕುತ್ತಿರುವ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ

More from the blog

ಏ.21 ರಂದು ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ

ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ(ರಿ.)S74 ಇದರ ವತಿಯಿಂದ ವಿಶ್ವಜ್ಞಾನಿ ಡಾ| ಬಿ. ಆರ್ ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಸಂಘದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಆದಿದ್ರಾವಿಡ ಸಮಾಜ...

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...

ಲೋಕಸಭಾ ಚುನಾವಣೆ : ಬಂಟ್ವಾಳದ ಕಳ್ಳಿಗೆ ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...