Sunday, April 7, 2024

ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು: ಮಾನವ ಹಕ್ಕುಗಳ ದಿನಾಚರಣೆ

ಬಂಟ್ವಾಳ: ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಮಾನವ ಹಕ್ಕುಗಳ ದಿನಾಚರಣೆಯನ್ನು ಇಂದು (ಡಿ.10) ಆಚರಿಸಲಾಯಿತು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಹಾಗೂ ಮಾನವ ಹಕ್ಕುಗಳ ಕೋಶದ ಸಂಚಾಲಕಿ ನಸೀಮಾ ಬೇಗಂ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವ ಮಾನವ ಹಕ್ಕುಗಳ ಘೋಷಣೆ, ಅದರ ಮಹತ್ವವನ್ನು ವಿವರಿಸಿ ಮಾನವ ಹಕ್ಕುಗಳೆಂದರೇನು, ವಿಶ್ವಸಂಸ್ಥೆ ಘೋಷಿಸಿದ ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆ ಮತ್ತು ಅದರಲ್ಲಿ ಅಡಕವಾಗಿರುವ 30 ವಿವಿಧ ಹಕ್ಕುಗಳನ್ನು ಉದಾಹರಣೆಗಳ ಮೂಲಕ ವಿವರಿಸಿದರು. ಈ ಹಕ್ಕುಗಳನ್ನು ಭಾರತದಲ್ಲಿ ಹೇಗೆ ಸಂವಿಧಾನದ ಮೂಲಕ ಜಾರಿಗೊಳಿಸಲಾಗಿದೆ ಮತ್ತು ಅದರ ಪರಿಣಾಮಗಳೇನು ಎನ್ನುವುದನ್ನು ತಿಳಿಸಿದರು. ಪರಸ್ಪರ ಹಕ್ಕುಗಳನ್ನು ಗೌರವಿಸುವ ಮೂಲಕ ಶಾಂತಿಯುತ, ಸೌಹಾರ್ದಯುತ ಅಂತರರಾಷ್ಟ್ರೀಯ ಸುಸ್ಥಿರ ಸಮಾಜದ ನಿರ್ಮಾಣಕ್ಕೆ ಸಹಕರಿಸುವಂತೆ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಹೆಚ್.ಕೆ. ಮಾತನಾಡಿ, ಮೂಲಭೂತ ಹಕ್ಕುಗಳು ಮಾನವನ ಸ್ವಭಾವ ಸಹಜ ಅವಕಾಶಗಳಾಗಿದ್ದು, ನೈತಿಕ ಹಕ್ಕುಗಳನ್ನು ಸೂಚಿಸುತ್ತದೆ. ಜಾಗತಿಕ ಮಟ್ಟದಲ್ಲಿ ಮಾನವ ಹಕ್ಕುಗಳನ್ನು ವಿಶ್ವಸಂಸ್ಥೆಯು ಪೋಷಿಸುತ್ತಿದ್ದು, ಭಾರತದಲ್ಲಿ ಇವುಗಳ ರಕ್ಷಣೆಯ ಜವಾಬ್ದಾರಿಯನ್ನು ಸಂವಿಧಾನವು ಹೊತ್ತಿದೆ. ವ್ಯಕ್ತಿಯ ಬೌದ್ಧಿಕ, ನೈತಿಕ ಹಾಗೂ ಆಧ್ಯಾತ್ಮಿಕ ಬೆಳವಣಿಗೆಗೆ ಮೂಲಭೂತ ಹಕ್ಕುಗಳು ಮೂಲಾಧಾರಗಳಾಗಿವೆ. ನಮ್ಮ ಸಂವಿಧಾನವು ಕೊಡಮಾಡಲ್ಪಟ್ಟ 6 ಮೂಲಭೂತ ಹಕ್ಕುಗಳು ಪ್ರತಿಯೊಬ್ಬ ಭಾರತೀಯನ ಅಸ್ತಿತ್ವ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗಿದೆ. ವಿಶ್ವ ಮಾನವ ಹಕ್ಕುಗಳ ದಿನದಂದು ಮಾನವ ಹಕ್ಕುಗಳ ರಕ್ಷಣೆ ಹಾಗೂ ಬೆಳವಣಿಗೆಗೆ ಯುವಕರಾದ ತಾವು ಕೊಡುಗೆಯನ್ನು ನೀಡಬೇಕಿದೆ ಎಂದರು.

ತೃತೀಯ ಬಿಎ ತರಗತಿಯ ವಿದ್ಯಾರ್ಥಿನಿಯರಾದ ಶೃತಿ ಟಿ. ಸ್ವಾಗತಿಸಿ, ಪಲ್ಲವಿ ವಂದಿಸಿದರು. ಅಕ್ಷತ ಕಾರ್ಯಕ್ರಮ ನಿರೂಪಿಸಿ, ಚಂದ್ರಾವತಿ ಮತ್ತು ವಿಶಾಲಾಕ್ಷಿ ಪ್ರಾರ್ಥಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...