Sunday, April 7, 2024

ಡಿ.19-20ರಂದು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆ

ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆ ಉತ್ಸವವು
ಬ್ರಹ್ಮಶ್ರೀ ನೀಲೇಶ್ವರ ಕೆ ಯು ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವೈದಿಕ  ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರಗಲಿರುವುದು.

ಡಿ.19 ಶನಿವಾರದಂದು ಪುಣ್ಯಾಹ ಪಂಚಗವ್ಯ ಗಣಹೋಮ ಫಲಪಂಚಾಮೃತ ಅಭಿಷೇಕ ಶ್ರೀ ಪವಮಾನ ಸೂಕ್ತ ಅಭಿಷೇಕ ಮಹಾಮಂಗಳಾರತಿ ಅನ್ನಸಂತರ್ಪಣೆ ನಡೆಯಲಿದೆ. ನಂತರ ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ, ರಾತ್ರಿ ಕಾರ್ತಿಕ ಪೂಜೆ, ರಂಗಪೂಜೆ, ಪ್ರಸನ್ನ ಪೂಜೆ, ಕಲ್ಪೋಕ್ತ ಪೂಜೆ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಬಂಗಾರದ ಬಾಲೆ ಎಂಬ ತುಳು ಯಕ್ಷಗಾನ ಬಯಲಾಟ ಕಾಲಮಿತಿಯಲ್ಲಿ ಷಣ್ಮುಖ ಯುವಕ ಸಂಘ ಮುಗುಳಿಯ ಪ್ರಾಯೋಜಕತ್ವದಲ್ಲಿ ಜರಗಲಿದೆ.

ಡಿ.20 ಆದಿತ್ಯವಾರದಂದು ಗಣಪತಿ ಹೋಮ ಬಿಂಬ ಶುದ್ಧಿ ಸಾನಿಧ್ಯ ಕಲಶಪೂಜೆ ಕಲಶಾಭಿಷೇಕ ಫಲಪಂಚಾಮೃತ ಅಭಿಷೇಕ ನಾಗತಂಬಿಲ ಆಶ್ಲೇಷ ಬಲಿ ಹೋಮ ಆಶ್ಲೇಷ ಬಲಿ ಪೂಜೆ ಅನ್ನಸಂತರ್ಪಣೆ ನಡೆಯಲಿದೆ. ನಂತರ ವಿವಿಧ ಭಜನಾ ತಂಡಗಳಿಂದ  ನಾಮ ಸಂಕೀರ್ತನೆ ಬ್ರಹ್ಮಶ್ರೀ ನೀಲೇಶ್ವರ ಕೆ ಯು ಪದ್ಮನಾಭ ತಂತ್ರಿಗಳ ಉಪಸ್ಥಿತಿಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎo ಸುಬ್ರಹ್ಮಣ್ಯ ಭಟ್ ಅವರಿಗೆ ದೇವಾಲಯದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಶ್ರೀ ದೇವರಿಗೆ ಕಾರ್ತಿಕ ಪೂಜೆ ರಂಗಪೂಜೆ ದೇವರ ಬಲಿ ಉತ್ಸವ ವಸಂತ ಕಟ್ಟೆಪೂಜೆ ದರ್ಶನ ಬಲಿ ರಾಜಾಂಗಣ ಪ್ರಸಾದ ಮಂತ್ರಾಕ್ಷತೆ ಶ್ರದ್ಧಾಭಕ್ತಿಯಿಂದ ವಿದ್ಯುಕ್ತವಾಗಿ ಜರಗಲಿದೆ ಜಯಶಂಕರ ಬಾಸ್ರಿ ತಾಯ ಅದೃಕ್ಕು ಉತ್ಸವ ಸಮಿತಿ ಅಧ್ಯಕ್ಷರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...