Saturday, April 6, 2024

ಕೇಂದ್ರ ಸರ್ಕಾರದ ‘ಬಜೆಟ್‌ಗೆ ಡೇಟ್‌ ಫಿಕ್ಸ್‌’: ಸಲಹೆ, ಸೂಚನೆಗೆ ದೇಶದ ಜನತೆಗೆ ಮನವಿ

ಸಿಐಐ ಪಾಲುದಾರಿಕೆ ಶೃಂಗಸಭೆ 2020 ರಲ್ಲಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೀತಾರಾಮನ್, ಭಾರತದ ನೂರು ವರ್ಷಗಳಲ್ಲಿ ಇಂತಹ ಸಾಂಕ್ರಾಮಿಕ ರೋಗದ ನಂತರ ಬಜೆಟ್ ಸಿದ್ಧವಾಗಿರುವುದನ್ನು ನೋಡಿರಲಿಲ್ಲ ಅಂಥ ಹೇಳಿದರು.

ನಿಮ್ಮ ಸಲಹೆ, ಸೂಚನೆಗಳನ್ನು ನಮಗೆ ಕಳುಹಿಸಿಕೊಡಿ ಅಂತ ದೇಶದ ಜನತೆಯಲ್ಲಿ ಅವರು ಮನವಿ ಮಾಡುತ್ತ, ನಿಮ್ಮ ಸಲಹೆ, ಸೂಚನೆಗಳನ್ನು ಪಡೆಯದ ಹೊರತು ನಾವು ಬಜೆಟ್‌ ಅನ್ನು ಮಂಡನೆ ಮಾಡಲು ಸಾಧ್ಯವಾಗೋದಿಲ್ಲ ಅಂತ ಹೇಳಿದರು. ಇನ್ನೂ ಭಾರತದ ಉತ್ತಮ ಬೆಳವಣಿಗೆ ಮತ್ತು ಅದರ ಗಾತ್ರ, ಜನಸಂಖ್ಯೆ ಮತ್ತು ಆರ್ಥಿಕತೆಯ ಬೆಳವಣಿಗೆಯ ಸಾಧ್ಯತೆಯನ್ನು ಗಮನಿಸಿದರೆ, ನಾವು ಇತರ ಕೆಲವು ದೇಶಗಳೊ೦ದಿಗೆ ಜಾಗತಿಕ ಬೆಳವಣಿಗೆಯ ಎಂಜಿನ್ ಆಗುತ್ತೇವೆ ಎಂದರು. 2021-22ರ ಕೇಂದ್ರ ಜೆಟ್ ಅನ್ನು 2021ರ ಫೆಬ್ರವರಿ 1ರಂದು ಸಂಸತ್ತಿನಲ್ಲಿ ಆಯ್ಕೆ ಮಾಡಲಾಗುತ್ತದೆ ಅಂತ ಅವರು ಹೇಳಿದರು.

ಒಂದು ಕಡೆ ಹೆಚ್ಚು ಮೂಲಸೌಕರ್ಯ ನಿಧಿಯನ್ನು ಒದಗಿಸುವುದರ ಜೊತೆಗೆ, ಕಟ್ಟಡಗಳು ಮತ್ತು ಆಸ್ಪತ್ರೆಗಳಿಗೆ ಖಾಸಗಿ ಸಹಭಾಗಿತ್ವವನ್ನು ತರುವುದು ಮಾತ್ರವಲ್ಲದೆ, ಈ ಆಸ್ಪತ್ರೆಗಳನ್ನು ನಡೆಸಲು ಸಾಮರ್ಥ್ಯಗಳನ್ನು ಒದಗಿಸುವುದು ಕೂಡ ಮುಖ್ಯವಾಗುತ್ತದೆ ಎಂದು ಸೀತಾರಾಮನ್ ಹೇಳಿದರು.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...