Sunday, April 7, 2024

ಡಿ.27: ಕುಲಾಲರ ಸ್ನೇಹ ಮಿಲನ-ಸ್ಪರ್ಧಾ ಕೂಟ

ಬಂಟ್ವಾಳ : ಕರ್ನಾಟಕ ರಾಜ್ಯ ಕುಂಬಾರ/ಕುಲಾಲರ ಯುವವೇದಿಕೆಗಳ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ಮಂಗಳೂರು ಇದರ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪದಪ್ರಧಾನ ಸಮಾರಂಭದ ಪ್ರಯುಕ್ತ ಸ್ವಜಾತಿ ಬಾಂಧವರಿಗೆ ಸ್ನೇಹ ಮಿಲನ ತಾಲೂಕು ಮಟ್ಟದ ಸ್ಪರ್ಧಾಕೂಟ ಡಿಸೆಂಬರ್ 27ರಂದು ಬಿ.ಸಿ.ರೋಡಿನ ಪೊಸಳ್ಳಿ ಸಭಾಭವನದಲ್ಲಿ ನಡೆಯಲಿದೆ.
ಈ ಸಂದರ್ಭ ಮಕ್ಕಳಿಗಾಗಿ ಛದ್ಮವೇಷ, ಚಿತ್ರಕಲೆಯಲ್ಲಿ 1ರಿಂದ 4ನೇ ತರಗತಿ ಒಳಗಿನ ಮಕ್ಕಳಿಗೆ ನಮ್ಮ ಪರಿಸರ, 5ರಿಂದ 8ನೇ ತರಗತಿ ಮಕ್ಕಳಿಗೆ ಕರಾವಳಿ ಅಲೆಗಳು, 9ರಿಂದ 12ನೇ ತರಗತಿ ಮಕ್ಕಳಿಗೆ ಕುಂಬಾರ ಮಡಿಕೆ ಮಾಡುವುದು, ಪೇಪರ್ ಕ್ರಾಫ್ಟ್, ಮಹಿಳೆಯರಿಗಾಗಿ ತೆಂಗಿನಗರಿ ಹೆಣೆಯುವುದು, ಹೂ ಕಟ್ಟುವ ಸ್ಪರ್ಧೆ, ಮೆಹಂದಿ ಸ್ಪರ್ಧೆ, ಪುರುಷರಿಗಾಗಿ ಕ್ಯಾರಂ ಬೋರ್ಡ್ ಸ್ಪರ್ಧೆ, 5 ವರ್ಷದ ಒಳಗಿನ ಮಕ್ಕಳಿಗೆ ಭಕ್ತ ಕುಂಬಾರ ಛದ್ಮವೇಷ ಸ್ಪರ್ಧೆ, ಮುಕ್ತ ವಿಭಾಗದಲ್ಲಿ ಡ್ಯಾನ್ಸ್ ಧಮಕಾ – ಡ್ಯಾನ್ಸ್ ಸ್ಪರ್ಧೆ, ತುಳುನಾಡ ಪಾಡ್ದನ ಸ್ಪರ್ಧೆ, ಕಸದಿಂದ ರಸ, ಕ್ಲೇ ಮಾಡೆಲಿಂಗ್ ಸ್ಪರ್ಧೆ ನಡೆಯಲಿರುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅಧ್ಯಕ್ಷ ಸತೀಶ್ ಕುಲಾಲ್ ಜಕ್ರಿಬೆಟ್ಟು, ಕಾರ್ಯದರ್ಶಿ ಪುರುಷೋತ್ತಮ ಎಸ್. ಮೈರಾನ್‌ಪಾದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...