Wednesday, April 10, 2024

ಡಿ.10-14 : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಇಂದಿನಿಂದ ಆರಂಭಗೊಳ್ಳಲಿದೆ.
ಇಂದಿನಿಂದ ಡಿಸೆಂಬರ್ 14ರ ವರೆಗೆ ಲಕ್ಷದೀಪೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ದೇವಸ್ಥಾನ, ಬೀಡು, ವಸತಿಛತ್ರಗಳು, ಉದ್ಯಾನ, ಪ್ರವೇಶದ್ವಾರ, ಬಾಹುಬಲಿ ಬೆಟ್ಟವನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದ್ದು, ಶ್ರೀಕ್ಷೇತ್ರ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿದೆ.
ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಯುಟ್ಯೂಬ್ ಮತ್ತು ಫೇಸ್‍ಬುಕ್‍ನಲ್ಲಿ ಕಾರ್ಯಕ್ರಮಗಳ ನೇರ ಪ್ರಸಾರ ನಡೆಯಲಿದೆ. ಈ ಬಾರಿ ವಸ್ತು ಪ್ರದರ್ಶನ ರದ್ದುಗೊಳಿಸಲಾಗಿದೆ. ಕಾರ್ಯಕ್ರಮಗಳನ್ನು ಮನೆಯಲ್ಲೇ ಕುಳಿತು ನೋಡಬೇಕು ಎಂದು ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಭಕ್ತರಲ್ಲಿ ವಿನಂತಿಸಿಕೊಂಡಿದ್ದಾರೆ.
ಡಿ.13 ರಂದು ಸರ್ವಧರ್ಮ ಸಮ್ಮೇಳನದ 88ನೇ ಅಧಿವೇಶನವನ್ನು ವಸತಿ ಸಚಿವ ವಿ. ಸೋಮಣ್ಣ ಉದ್ಘಾಟಿಸಲಿದ್ದಾರೆ. ಕನಕಗಿರಿ ಜೈನ ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. 14ರಂದು ನಡೆಯುವ ಸಾಹಿತ್ಯ ಸಮ್ಮೇಳನವನ್ನು ಹಿರಿಯ ವಿದ್ವಾಂಸ ಡಾ.ಎಸ್ ರಂಗನಾಥ್ ಉದ್ಘಾಟಿಸಲಿದ್ದು, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ರಾತ್ರಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ.

More from the blog

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...