Sunday, April 14, 2024

ಕಡತಗಳ ವಿಲೇವಾರಿಗೆ ವಿಳಂಬಧೋರಣೆ ಸಲ್ಲದು: ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್

ಬಂಟ್ವಾಳ : ಯಾವುದೇ ಕಡತಗಳ ವಿಲೇವಾರಿಗೆ ವಿಳಂಬಧೋರಣೆ ಅನುಸರಿಸದೆ, ಜನತೆಯ ಹಿತದೃಷ್ಟಿಯಿ‌ಂದ
ಶೀಘ್ರ ವಿಲೇವಾರಿ ಮಾಡಬೇಕು ಬಂಟ್ವಾಳ ತಾಲೂಕು ಆಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ್ ಹೇಳಿದರು. ಬಿ.ಸಿ.ರೋಡಿನ ಬಂಟ್ವಾಳ ತಾಲೂಕು ಕಛೇರಿಗೆ ಗುರುವಾರ ಭೇಟಿ ನೀಡಿದ ಅವರು, ಕಡತ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.


ಕಳೆದ ಹಲವಾರು ವರ್ಷಗಳಿಂದ ವಿವಿಧ ಕಾರಣಗಳಿಂದ ವಿಲೇವಾರಿಯಾಗದೆ ಬಾಕಿಯುಳಿದಿರುವ ಕಡತಗಳನ್ನು ಶೀಘ್ರ ವಿಲೇವಾರಿ ಮಾಡಿ, ಪ್ರತಿ 15 ದಿನಗಳಿಗೊಮ್ಮೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ, ಸರ್ಕಾರಿ ಜಮೀನು ಅತಿಕ್ರಮಣ ಹಾಗೂ ಅಕ್ರಮ ಕೋರೆಗಳ ಕುರಿತಾಗಿ ಬಂದಿರುವ ದೂರುಗಳ ಕುರಿತಾಗಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಹಾಗೂ ತಹಶೀಲ್ದಾರರು ಜಂಟಿಯಾಗಿ ಸ್ಥಳತನಿಖೆ ಮಾಡಬೇಕು, ವಿಲೇವಾರಿಯಾಗದೆ ಉಳಿದಿರುವ ಕಡತಗಳ ಕುರಿತಾಗಿ ಕಾರಣ ಸಹಿತ ಸಮಗ್ರ ಮಾಹಿತಿ ನೀಡುವಂತೆ ತಹಶೀಲ್ದಾರರಿಗೆ ಸೂಚನೆ ನೀಡಲಾಗಿದೆ ಎಂದವರು ಹೇಳಿದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಹಮ್ಮಿಕೊಂಡಿರುವುದಾಗಿ ತಿಳಿಸಿದ ಅವರು, ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕು ಕಛೇರಿಯಲ್ಲಿ ಕಡತಗಳ ಪರಿಶೀಲನೆ ಹಾಗೂ ದೂರು ಅರ್ಜಿಗಳ ವಿಚಾರಣೆ ನಡೆಸಲಾಗಿದೆ ಎಂದರು.
ಲೋಕಾಯುಕ್ತ ಎಸ್.ಪಿ.ಕುಮಾರಸ್ವಾಮಿ, ಡಿ.ವೈ.ಎಸ್.ಪಿ.ವಿಜಯಪ್ರಕಾಶ್,ಲೋಕಾಯುಕ್ತ ಇನ್ಸ್‌ಪೆಕ್ಟರ್ ಅಮಾನುಲ್ಲಾ ಖಾನ್, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ಬಂಟ್ವಾಳ ತಹಶೀಲ್ದಾರ್ ರಶ್ಮೀ ಮೊದಲಾದವರು ಉಪಸ್ಥಿತರಿದ್ದರು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...