Wednesday, April 10, 2024

ಮಧ್ವ ಯಕ್ಷ ಕೂಟ: ವಾರ್ಷಿಕೋತ್ಸವ, ತಾಳಮದ್ದಳೆ

ಬಂಟ್ವಾಳ : ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಮಧ್ವ ಯಕ್ಷಕೂಟ ಇದರ ಪ್ರಥಮ ವಾರ್ಷಿಕೋತ್ಸವ ಡಿ.13ರಂದು ಮಧ್ವದ ಮಧ್ವ ಪ್ಯಾಲೇಸ್ ಸಭಾಂಗಣದಲ್ಲಿ ನಡೆಯಲಿದೆ.


ಮಧ್ಯಾಹ್ನ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಕೆ.ಎಲ್ ಆಚಾರ್ಯ ಕೋಟಿಮೇರು ಅವರು ಉದ್ಘಾಟಿಸಲಿರುವರು. ಶ್ರೀ ಕ್ಷೇತ್ರ ಕಾರಿಂಜದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪಿ.ಜಿನರಾಜ ಆರಿಗ, ಜ್ಯೋತಿಷ ವಿದ್ವಾನ್ ವೆಂಕಟರಮಣ ಮುಚ್ಚಿನ್ನಾಯ, ಕಾವಳಪಡೂರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಶ್ರೀ ಕ್ಷೇತ್ರ ಕಾರಿಂಜದ ಆಡಳಿತಾಧಿಕಾರಿ ನೋಣಯ ನಾಯ್ಕ್, ಉದ್ಯಮಿ ಸಂಜೀವ ಶೆಟ್ಟಿ ಮೂಡಾಯೂರು, ನಿವೃತ್ತ ಯೋಧ ಕಾಂತಪ್ಪ ಗೌಡ, ಹಿರಿಯ ಅರ್ಥಧಾರಿ ತಿಮ್ಮಪ್ಪ ಶೆಟ್ಟಿ ಪಾತಿಲ ಮತ್ತಿತರ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿರುವರು. ಬಳಿಕ ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ ನಡೆಯಲಿದೆ ಎಂದು ಅಧ್ಯಕ್ಷ ಭಾಸ್ಕರ ಶೆಟ್ಟಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...