Thursday, October 19, 2023

ಒಡಿಯೂರು: ಡಿ.29 ಶ್ರೀ ದತ್ತ ಜಯಂತ್ಯುತ್ಸವ-ಶ್ರೀ ದತ್ತಮಹಾಯಾಗ ಸಪ್ತಾಹ ಸಮಾಪ್ತಿ

Must read

ಒಡಿಯೂರು: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಡಿ.29ರಂದು ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ದತ್ತ ಜಯಂತ್ಯುತ್ಸವ-ಶ್ರೀ ದತ್ತ ಮಹಾಯಾಗ ಸಪ್ತಾಹ ಸಮಾಪನ ನಡೆಯಲಿದೆ.
ಬೆಳಗ್ಗೆ 8 ಗಂಟೆಗೆ ಮಹಾಮಂಗಳಾರತಿ, 9ಕ್ಕೆ ಶ್ರೀ ದತ್ತಮಾಲಾಧಾರಿಗಳಿಂದ ನಾಮಸಂಕೀರ್ತನಾ ಶೋಭಾಯಾತ್ರೆ, ಬಳಿಕ ಸ್ವಯಂಭೂ ನಾಗರಾಜ ಸನ್ನಿಧಿಯಲ್ಲಿ ನಾಗತಂಬಿಲ, ಗಂಟೆ 11 ರಿಂದ ಪೂಜ್ಯ ಶ್ರೀಗಳವರಿಂದ ಅನುಗ್ರಹ ಸಂದೇಶ ನಡೆಯಲಿದೆ.
ಮಧ್ಯಾಹ್ನ ಗಂಟೆ 12 ರಿಂದ ಶ್ರೀ ದತ್ತ ಮಹಾಯಾಗ ಸಪ್ತಾಹದ ಪೂರ್ಣಾಹುತಿ, ವೇದ-ಗುರುಚರಿತ್ರೆ ಪಾರಾಯಣ ಸಮಾಪ್ತಿ, ಮಹಾಪೂಜೆ, ಪೂಜ್ಯ ಶ್ರೀಗಳವರಿಂದ ಸಂಪ್ರದಾಯದಂತೆ ಮಧುಕರಿ ಮಂತ್ರಾಕ್ಷತೆ, ಮಹಾಸಂತರ್ಪಣೆ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಮಧ್ಯಾಹ್ನದ ಬಳಿಕ 3ರಿಂದ ಖ್ಯಾತ ಯಕ್ಷಗಾನ ಕಲಾವಿದ ಗೋಣಿಬೀಡು ಸಂಜಯಕುಮಾರ್ ಶೆಟ್ಟಿಯವರ ಸಂಯೋಜನೆಯಲ್ಲಿ ’ಚೂಡಾಮಣಿ’ ಯಕ್ಷಗಾನ ಬಯಲಾಟ. ರಾತ್ರಿ ರಂಗಪೂಜೆ, ಮಹಾಪೂಜೆ, ಬೆಳ್ಳಿ ರಥೋತ್ಸವ ಸೇವೆ ಹಾಗೂ ಉಯ್ಯಾಲೆ ಸೇವೆಗಳು ನಡೆಯಲಿವೆ.

More articles

Latest article