Sunday, April 7, 2024

ಒಮ್ನಿ ಕಾರು ಪ್ರಪಾತಕ್ಕೆ : ಮಕ್ಕಳ ಸಹಿತ ಮಹಿಳೆಯರಿಗೆ ಗಾಯ

ವಿಟ್ಲ: ಓಮ್ನಿ ಕಾರು ಪ್ರಪಾತಕ್ಕೆ ಉರುಳಿದ ಪರಿಣಾಮ ಮಹಿಳೆಯರು ಹಾಗೂ ಮಕ್ಕಳು ಗಾಯಗೊಂಡ ಘಟನೆ ವಿಟ್ಲ-ಮಂಗಳೂರು ರಸ್ತೆಯ ವೀರಕಂಬದಲ್ಲಿ ನಡೆದಿದೆ.

ವಿಟ್ಲ ಕಡೆಯಿಂದ ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ಪರಿಣಾಮ ವೀರಕಂಬ ಗ್ರಾಮ ಪಂಚಾಯತ್ ಕಚೇರಿಯ ಸಮೀಪ ಇರುವ ಪ್ರಪಾತಕ್ಕೆ ಉರಳಿದೆ.

ಕಾರಿನಲ್ಲಿ ಮಹಿಳೆಯರು ಹಾಗೂ ಮಕ್ಕಳಿದ್ದು, ಸಣ್ಣುಪುಟ್ಟ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಪಾತದ ಕೆಲಗಡೆ ಮನೆಯೊಂದು ಇದ್ದು, ಅವರ ಅಂಗಳಕ್ಕೆ ಈ ಕಾರು ಬಿದ್ದು, ಸಂಪೂರ್ಣವಾಗಿ ಜಖಂಗೊಂಡಿದೆ. ಓಮ್ನಿ ಕಾರಿನಲ್ಲಿದ್ದವರು ಮಾರಿಪಳ್ಳ ನಿವಾಸಿಗಳಾಗಿದ್ದು, ವಿಟ್ಲದ ಒಕ್ಕೆತ್ತೂರು ಎಂಬಲ್ಲಿರುವ ಸಂಬಂಧಿಕರ ಮನೆಗೆ ಬಂದು ಹಿಂತಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷಿದರ್ಶಿಗಳು ತಿಳಿಸಿದ್ದಾರೆ.

ವಿಟ್ಲ-ಕಲ್ಲಡ್ಕ ನಡುವೆ ಇರುವ ಅಪಾಯಕಾರಿ ತಿರುವಿನಲ್ಲಿ ಪ್ರಪಾಪ ಇದ್ದು, ಅಪಾಯವನ್ನು ಆಹ್ವಾನಿಸುತ್ತಿದೆ. ಕೆಲವು ವರ್ಷಗಳ ಹಿಂದೆ ಇದೇ ಪ್ರಪಾತಕ್ಕೆ ಜೀಪೊಂದು ಉರುಳಿ ಬಿದ್ದಿತ್ತು. ಇಲ್ಲಿ ತಡೆಗೋಡೆ ನಿರ್ಮಿಸಲು ಸ್ಥಳೀಯರು ಆಗ್ರಹಿಸಿದ್ದಾರೆ.

More from the blog

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...