Wednesday, April 10, 2024

ಹಳ್ಳಿ ಸರಕಾರ ರಚನೆಗೆ ಬಿರುಸಿನ ಪ್ರಚಾರ

ಬಂಟ್ವಾಳ: ಹಳ್ಳಿ ಸರಕಾರದ ಚುನಾವಣೆಯತ್ತ ಜನರ ಚಿತ್ತಪ್ರಭಾವ ಕಾವೇರಿದೆ.
ನಾಮಪತ್ರ ಸಲ್ಲಿಕೆಯಾದ ಬಳಿಕ ಚುರುಕುಗೊಂಡಿದ್ದ ಪ್ರಚಾರ ಕಳೆದ ಎರಡು ದಿನಗಳಿಂದ ಹಳ್ಳಿಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ.
ಸದಾ ಕೃಷಿ ಚಟುವಟಿಕೆಗಳ ಮೂಲಕ ಬ್ಯೂಸಿಯಾಗಿದ್ದ ಗ್ರಾಮೀಣ ಪ್ರದೇಶಗಳಲ್ಲಿ ಪ್ರಸ್ತುತ ಎಲ್ಲವೂ ಸ್ಥಗಿತಗೊಂಡು ಹಳ್ಳಿ ಸರಕಾರ ರಚನೆಯಾಗಬೇಕು, ಸಮರ್ಥ ಆಡಳಿತಗಾರನ ಆಯ್ಕೆ ಯಾಗಬೇಕು ಅದಕ್ಕಾಗಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಬೇಕು ಎಂಬ ದೃಷ್ಟಿಯಿಂದ ಹಳ್ಳಿ ಜನ ಎಲ್ಲಾ ಕೆಲಸ ಬದಿಗೊತ್ತಿ ಮತಬೇಟೆಯಲ್ಲಿ ಬ್ಯೂಸಿಯಾಗಿದ್ದಾರೆ.
ಪಕ್ಷದ ಚಿಹ್ನೆಗಳನ್ನು ಬಳಸದೆ ಗ್ರಾಮ ಪಂಚಾಯತ್ ಚುನಾವಣೆಗಳು ನಡೆದರೂ ಕೂಡ ರಾಷ್ಟ್ರೀಯ ಪಕ್ಷಗಳು ಗ್ರಾ.ಪಂ‌ಚುನಾವಣೆಯನ್ನು ಪ್ರತಿಷ್ಠೆಯ ಸಂಗತಿ ಯಾಗಿ ತೆಗೆದುಕೊಂಡಿರುವುದು ಸುಳ್ಳಲ್ಲ.

*30 ಅಧಿಕ ಗ್ರಾಮ ಪಂಚಾಯತ್ ಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವು: ದೇವಪ್ಪ ಪೂಜಾರಿ*

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 39 ಗ್ರಾಮ ಪಂಚಾಯತ್ ಗಳಲ್ಲಿ ಚುನಾವಣೆ ನಡೆಯುತ್ತಿದ್ದು ಎಲ್ಲಾ ಪಂಚಾಯತ್ ಗಳಲ್ಲಿಯೂ ಅಭ್ಯರ್ಥಿಗಳು ಸ್ಪರ್ದೆ ಮಾಡುತ್ತಿದ್ದಾರೆ.
ಒಟ್ಟು 570 ಸ್ಥಾನಗಳ ಪೈಕಿ 567 ಅಭ್ಯರ್ಥಿಗಳು ಕಣದಲ್ಲಿದ್ದಾರೆ, ಅದರಲ್ಲಿ ಅಮ್ಮುಂಜೆ, ಕರಿಂಯಗಳ ಬಾಳ್ತಿಲ ತಲಾ ಒಂದು ವಿಟ್ಲಪಡ್ನೂರು 2 ಒಟ್ಟು
ಐದು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ 39 ರಲ್ಲಿ 30 ಕ್ಕೂ ಅಧಿಕ ಗ್ರಾಮ ಪಂಚಾಯತ್ ಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ತಿಳಿಸಿದ್ದಾರೆ.
ಪಕ್ಷದೊಳಗಿನ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಗಳು ಶಮನಗೊಂಡಿದೆ, ಯಾವುದೇ ಗೊಂದಲವಿಲ್ಲದೆ ಒಗ್ಗಟ್ಟಿನ ಮೂಲಕ ಚುನಾವಣೆಯಲ್ಲಿ ಗೆಲುವು ಸಾಧಿಸುವ ಗುರಿ ಹೊಂದಿದ್ದೇವೆ .
214 ಬೂತ್ ಗಳ ಗ್ರಾ.ಪಂ.ಬೂತ್ ಸಮಿತಿ ಗಳಲ್ಲಿ ಪಂಚರತ್ನ ಸಮಿತಿ ಮೂಲಕ ಪೇಜ್ ಪ್ರಮುಖ್ ರನ್ನು ಸಕ್ರೀಯ ಗೊಳಿಸಲಾಗಿತ್ತು.
ಈ ಬಾರಿ ವಿಶೇಷ ವಾಗಿ ಗ್ರಾ.ಪಂ.ಅಧಿಕಾರಕ್ಕೆ ಬರುವ ಉದ್ದೇಶದಿಂದ 39 ಗ್ರಾಮ ಪಂಚಾಯತ್ ಗಳಲ್ಲಿಯೂ ಕುಟುಂಬ ಮಿಲನ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿದೆ.
ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಲ್ಲಿ ಭಾರತೀಯ ಜನತಾ ಪಾರ್ಟಿಯ ಬೆಂಬಲಿತ ಅಭ್ಯರ್ಥಿಗಳು ಗೆಲುವಿಗೆ ಪೂರಕವಾದ ವಾತಾವರಣ ಇದೆ.
ಕೇಂದ್ರ ,ರಾಜ್ಯ ಸರಕಾರದ ಸಾಧನೆ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಅಭಿವೃದ್ಧಿ ಕಾರ್ಯಗಳು ನಮಗೆ ಶ್ರೀರಕ್ಷೆಯಾಗಲಿದೆ.
ಕೋವಿಡ್ ಸಂದರ್ಭದಲ್ಲಿ ರಾಜ್ಯ ಕೇಂದ್ರ ಸರಕಾರ ಜನರಿಗೆ ನೀಡಿದ ಪ್ಯಾಕೇಜ್ ಜೊತೆ ಅಭಿವೃದ್ಧಿ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿದೆ.

*ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ನಲ್ಲಿ 16 ಸ್ಥಾನಗಳ ಪೈಕಿ 14 ಸ್ಥಾನಗಳಲ್ಲಿ ಬೆಂಬಲಿತರ ಗೆಲುವು : ಬೇಬಿ ಕುಂದರ್*
ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ನಲ್ಲಿ 16 ಗ್ರಾ.ಪಂ.ಗಳ ಪೈಕಿ 219 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಅದರಲ್ಲಿ ಅಮ್ಟಾಡಿ ಗ್ರಾ.ಪಂ.ನ ಒಂದು ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದು, 218 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಇವುಗಳ ಪೈಕಿ 14 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದೇವೆ.
ರಾಜ್ಯ ಸರಕಾರ ಆಡಳಿತ ದಲ್ಲಿ ಸಂಪೂರ್ಣ ವಿಫಲವಾಗಿದ್ದು ಇದೇ ವಿಚಾರದಲ್ಲಿ ಈ ಬಾರಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅಭೂತಪೂರ್ವ ಗೆಲವು ಸಾಧಿಸಲಿದ್ದಾರೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿ ಕುಂದರ್ ಹೇಳಿದ್ದಾರೆ.
ಪಕ್ಷದೊಳಗೆ ಯಾವುದೇ ಗೊಂದಲಗಳಿಲ್ಲ, ಒಗ್ಗಟ್ಟಿನ ಪ್ರದರ್ಶನ ದ ಮೂಲಕ ಚುನಾವಣೆಯನ್ನು ಎದುರಿಸಲಿದ್ದೇವೆ.
ಎಲ್ಲಾ ಜಾತಿ ಮತ, ಧರ್ಮ , ಭಾಷೆಯ ಜನರಿಗೆ ಸಮಾನತೆಯ ನ್ನು ಕಾಪಾಡಿಕೊಂಡು ಈ ಬಾರಿಯ ಗ್ರಾ.ಪಂ.ಚುನಾವಣೆಯಲ್ಲಿ ಸೀಟು ಹಂಚಿಕೆ ಮಾಡಲಾಗಿದೆ.
ರಮಾನಾಥ ರೈ ಅವರು ಮಾಡಿದ ಅಭಿವೃದ್ಧಿ ಕಾರ್ಯಕ್ರಮ ಗಳು ಜನರ ಮುಂದಿದ್ದು , ಇಡೀ ಕ್ಷೇತ್ರದ ಜನತೆ ಅವರ ಪರವಾಗಿ ನಿಂತು ಗ್ರಾ.ಪಂ.ಚುನಾವಣೆಯಲ್ಲಿ ಗೆಲುವು ಸಾಧಿಸಲು ಕೈಜೋಡಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.

*23 ಗ್ರಾ.ಪಂ.ಗಳ ಪೈಕಿ 20 ರಲ್ಲಿ ಗೆಲುವು ಸಾಧಿಸಲಿದ್ದೇವೆ : ಸುದೀಪ್ ಶೆಟ್ಟಿ*

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಒಟ್ಟು 23 ಗ್ರಾ.ಪಂ.ಗಳಿದ್ದು 351 ಅಭ್ಯರ್ಥಿ ಗಳು ಸ್ಪರ್ಧೆ ಮಾಡಿದ್ದಾರೆ.
ಅದರಲ್ಲಿ ವಿಟ್ಪಪಡ್ನೂರು ಎರಡು ಉಳಿದಂತೆ ಬಾಳ್ತಿಲ , ಕರಿಂಯಗಳ, ಅಮ್ಮುಂಜೆ ತಲಾ ಒಂದು ಸ್ಥಾನಗಳಲ್ಲಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರಸ್ತುತ 346 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ.
ಮಂಗಳವಾರದಿಂದ ಪ್ರತಿ ಕಾರ್ಯ ಕರ್ತರು ಅವಿರತವಾಗಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ.
ಪ್ರತಿ ಬೂತ್ ಗಳಲ್ಲಿಯೂ ಕಾರ್ಯಕರ್ತರು ಗ್ರಾಮದ ಸೇವಕರಾಗಿ ಮುಂದಿನ ದಿನಗಳಲ್ಲಿ ಸೇವೆ ಮಾಡಲು ಅವಕಾಶ ನೀಡುವಂತೆ ಮತಯಾಚನೆ ನಡೆಸುತ್ತಿದ್ದಾರೆ.
ಉತ್ತಮ ಪ್ರತಿಕ್ರಿಯೆ ಗಳು ಬರುತ್ತಿದ್ದು 20 ,ಸ್ಥಾನ ಗಳು ಕಾಂಗ್ರೇಸ್ ಬೆಂಬಲಿತರ ಪಾಲಾಗಲಿದೆ ಎಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುದೀಪ್ ಶೆಟ್ಟಿ ತಿಳಿಸಿದ್ದಾರೆ.

More from the blog

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....