Wednesday, April 10, 2024

ಸಜೀಪನಡು : ಜ್ಞಾನ ವಿಕಾಸ ಕಾರ್ಯಕ್ರಮ ವಾರ್ಷಿಕೋತ್ಸವ

ಬಂಟ್ವಾಳ: ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ. ಟ್ರಸ್ಟ್(ರಿ) ಬಂಟ್ವಾಳ, ಪಾಣೆಮಂಗಳೂರು ವಲಯ ಮತ್ತು ಸರಕಾರಿ ಆಯುಷ್ ಚಿಕಿತ್ಸಾಲಯ ಸಜೀಪಮೂಡ ಇವುಗಳ ಸಹಭಾಗಿತ್ವದಲ್ಲಿ ಶ್ರೀ ಜ್ಯೋತಿ ಜ್ಞಾನ ವಿಕಾಸ ಕಾರ್ಯಕ್ರಮದ ವಾರ್ಷಿಕ ದಿನಾಚರಣೆ ಮತ್ತು ಮಹಿಳಾ ಸದಸ್ಯರಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮ ಜರಗಿತು.
ಶ್ರೀಶನ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮುಖ್ಯಸ್ಥ ವೆಂಕಟೇಶ್ವರ ಭಟ್ ಮಲ್ಲಿಂಜ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ್ ದೇರಾಜೆ ಅವರು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಅಂಬೇಡ್ಕರ್ ಭವನದ ಆಡಳಿತ ಸಮಿತಿ ಸದಸ್ಯ ಚಂದಪ್ಪ ಅವರು ಭಾಗವಹಿಸಿದರು. ಸರಕಾರಿ ಆಯುರ್ವೇದ ಚಿಕಿತ್ಸಾಲಯ ಸಜಿಪನಡುವಿನ ಆಯುಷ್ ವೈದ್ಯ ಅಧಿಕಾರಿ ಡಾಕ್ಟರ್ ಮಣಿಕರ್ಣಿ ಕಾ ಆಯುಷ್ ಇಲಾಖೆಯ ಮೂಲಕ ಸಿಗುವ ವೈದ್ಯಕೀಯ ಸೌಲಭ್ಯಗಳನ್ನು ಬಳಸಿಕೊಳ್ಳುವಂತೆ ತಿಳಿಸಿದರು.
ಸಜೀಪನಡು ಹಿರಿಯ ಆರೋಗ್ಯ ಸಹಾಯಕಿ ಜಲಜಾಕ್ಷಿ, ಆಯುಷ್ ಇಲಾಖೆ ಆರೋಗ್ಯ ಸಹಾಯಕಿ ಸಬಿತ ಸಂಪನ್ಮೂಲ ವ್ಯಕ್ತಿಯಾಗಿ ಮಹಿಳೆಯರ ಆರೋಗ್ಯ ರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಸರಕಾರಿ ಆಯುರ್ವೇದ ಚಿಕಿತ್ಸಾಲಯ ಸಜೀಪ ಮೂಡ ಯೋಗ ತರಬೇತುದಾರ ವಿನಾಯಕ ಕೃಷ್ಣ ಅವರು ಯೋಗದ ಮೂಲಕ ಆರೋಗ್ಯ ರಕ್ಷಣೆಯ ಸಹಜ ವಿಧಾನಗಳ ಬಗ್ಗೆ ವಿವರಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸಪ್ನಾ ಅವರು ಪ್ರಾಸ್ತಾವಿಕ ಮಾತನಾಡಿದರು. ಪಾಣೆಮಂಗಳೂರು ವಲಯ ಮೇಲ್ವಿಚಾರಕಿ ಅಮಿತ ಅವರ ನಿರೂಪಣೆಯಲ್ಲಿ ನಿಶ್ಮಿತಾ ಸ್ವಾಗತಿಸಿ, ಸೇವಾ ಪ್ರತಿನಿಧಿ ಶಕೀಲಾ ವಂದಿಸಿದರು.

More from the blog

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...