Saturday, April 6, 2024

ಧರ್ಮಸ್ಥಳದಲ್ಲಿ ಸಮವಸರಣ ಪೂಜೆ

ಉಜಿರೆ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಂಗಳವಾರ ಸಮವಸರಣ ಪೂಜೆ ನಡೆಯಿತು. ತೀರ್ಥಂಕರರು ತಮ್ಮ ದಿವ್ಯಧ್ವನಿ ಮೂಲಕ ಧರ್ಮೋಪದೇಶ ನೀಡುವ ಧಾರ್ಮಿಕ ಸಭೆಗೆ ಸಮವಸರಣ ಎನ್ನುತ್ತಾರೆ. ಇಲ್ಲಿ ಸಕಲ ಪ್ರಾಣಿ, ಪಕ್ಷಿಗಳಿಗೂ, ಸರ್ವಧರ್ಮೀಯರಿಗೂ ಅವರವರ ಭಾಷೆಯಲ್ಲಿ ಧರ್ಮೋಪದೇಶ ಕೇಳುವ ಅವಕಾಶವಿದೆ. ಜೈನರ ಆರಾಧನಾ ಕೇಂದ್ರಗಳಾದ ಬಸದಿಗಳು ಸಮವಸರಣದ ಪ್ರತೀಕವಾಗಿವೆ.

ಶಿಶಿರ್ ಇಂದ್ರರ ನೇತೃತ್ವದಲ್ಲಿ ಅಷ್ಟವಿಧಾರ್ಚನೆ ಪೂಜೆ ಹಾಗೂ ಧಾರ್ಮಿಕ ವಿಧಿ-ವಿಧಾನಗಳು ನಡೆದವು. ಸೌಮ್ಯ, ಸಾವಿತ್ರಿ, ಮಂಜುಳಾ ಮತ್ತು ಅಭಿಜ್ಞಾ ಭಜನೆ, ಸ್ತೋತ್ರ ಮತ್ತು ಪೂಜಾಮಂತ್ರ ಪಠಣ ಮಾಡಿದರು.
ಎಸ್.ಡಿ.ಎಂ.ತಂಡದ ತೃಪ್ತಜೈನ್, ಸುಮನ್‌ಜೈನ್, ಸಮ್ಯಕ್‌ಜೈನ್, ರಂಜಿತ್ ಮತ್ತು ವಿನ್ಯಾಸ್‌ಜೈನ್ ಬಳಗದವರು ಸುಶ್ರಾವ್ಯವಾಗಿಜಿನ ಭಜನೆಗಳನ್ನು ಹಾಡಿದರು.
ಶ್ರೀ ಬಾಹುಬಲಿ ಸೇವಾ ಸಮಿತಿಯ ಸರ್ವ ಸದಸ್ಯರು ಸಹಕರಿಸಿದರು. ಮಹಾಮಂಗಳಾರತಿ ಮತ್ತು ಶಾಂತಿಮಂತ್ರ ಪಠಣದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು, ಡಿ. ಸುರೇಂದ್ರಕುಮಾರ್, ಅನಿತಾ ಸುರೇಂದ್ರಕುಮಾರ್, ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್, ಡಾ. ಬಿ. ಯಶೋವರ್ಮ, ಶ್ರದ್ಧಾ ಅಮಿತ್, ಶುತ, ಮೈತ್ರಿ, ಡಿ. ಶ್ರೇಯಸ್‌ ಕುಮಾರ್, ಡಿ. ನಿಶ್ಚಲ್‌ ಕುಮಾರ್‌ ಮತ್ತು ಮಾಣಿಲದ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು.
ಉಜಿರೆಯ ಮಹಾವೀರಜೈನ್‌ ಕಾರ್ಯಕ್ರಮ ನಿರ್ವಹಿಸಿದರು.

More from the blog

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...