Tuesday, April 9, 2024

ಸಮಾದೇಷ್ಟರು ಸುಳ್ಯ ಘಟಕ ಭೇಟಿ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ| ಮುರಲೀ ಮೋಹನ್ ಚೂಂತಾರು ರವರು ಇಂದು (ಡಿ.10) ಗುರುವಾರ  ಸುಳ್ಯ ಘಟಕಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯತ್ ಚುನಾವಣಾ ಕರ್ತವ್ಯಕ್ಕೆ ಗೃಹರಕ್ಷಕರನ್ನು ನಿಯೋಜಿಸುವ ಬಗ್ಗೆ ಚರ್ಚಿಸಿದರು ಹಾಗೂ ಗೃಹರಕ್ಷಕರ ಕುಂದು ಕೊರತೆಗಳನ್ನು ಆಲಿಸಿದರು.

ಈ ಸಂದರ್ಭದಲ್ಲಿ ಸಮಾದೇಷ್ಟ ಡಾ| ಮುರಲೀ ಮೋಹನ್ ಚೂಂತಾರು ಮಾತನಾಡಿ, ಪ್ರತಿಯೊಬ್ಬ ಗೃಹರಕ್ಷಕರು ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು ಮತ್ತು ಗುರುತಿನ ಚೀಟಿಯನ್ನು ಪಡೆಯದ ಗೃಹರಕ್ಷಕರು ಜಿಲ್ಲಾ ಗೃಹರಕ್ಷಕ ದಳ ಕಛೇರಿಗೆ ಬಂದು ಗುರುತಿನ ಚೀಟಿಯನ್ನು ಪಡೆದುಕೊಳ್ಳಬೇಕಾಗಿ ಸೂಚಿಸಿದರು. ಸುಳ್ಯ ಘಟಕದ ಘಟಕಾಧಿಕಾರಿ ಶ್ರೀ ಜಯಂತ್ ಶೆಟ್ಟಿ ಹಾಗೂ ಸುಳ್ಯ ಘಟಕದ ಗೃಹರಕ್ಷಕರು ಉಪಸ್ಥಿತರಿದ್ದರು.

More from the blog

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...