Saturday, April 6, 2024

ವಿದ್ಯುತ್ ಬಳಕೆದಾರರ ಮೇಲೆ ದೌರ್ಜನ್ಯ: ಡಿ.16ರಂದು ರೈತ ಸಂಘದಿಂದ ಪ್ರತಿಭಟನೆ

ವಿಟ್ಲ: ಮೆಸ್ಕಾಂ ಇಲಾಖೆಯ ಗ್ರಾಹಕರ ಮೇಲಿನ ದೌರ್ಜನ್ಯ ಹಾಗೂ ಕಾನೂನು ವಿರೋಧಿ ವರ್ತನೆಯ ವಿರುದ್ಧ ವಿಟ್ಲ ಮೆಸ್ಕಾಂ ಕಚೇರಿಯ ಮುಂಭಾಗದಲ್ಲಿ ಡಿ.16ರಂದು ಬೆಳಗ್ಗೆ 11ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಸುರೇಶ್ ಭಟ್ ಕೊಜಂಬೆ ಹೇಳಿದರು.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮಕ್ಕೆ ಗ್ರಾಹಕರ ಬಿಲ್ ಗಳಿಗೆ ಯಾವುದೇ ರೀತಿಯಲ್ಲಿ ಬಡ್ಡಿ ವಿಧಿಸುವ ಹಕ್ಕಿಲ್ಲವಾದರೂ ಫೈನಾನ್ಸ್ ರೀತಿಯಲ್ಲಿ ಬಡ್ಡಿ ವಿಧಿಸಲಾಗುತ್ತಿದೆ. ಬಿಲ್ ಪಾವತಿಸದಿದ್ದರೆ ನೋಟೀಸೂ ನೀಡದೇ ಸಂಪರ್ಕ ಕಡಿತ ಮಾಡಲಾಗುತ್ತಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ನಿಯಮಗಳನ್ನು ಉಲ್ಲಂಘಿಸಿ ಗ್ರಾಹಕರ ಮೇಲೆ ದೌರ್ಜನ್ಯ ಮಾಡಲಾಗುತ್ತಿದೆ ಎಂದು ವಿಟ್ಲ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದರು.
ಅಸಮರ್ಪಕ ವಿದ್ಯುತ್ ಪೂರೈಕೆ, ಹೊಸ ಸಂಪರ್ಕಕ್ಕೆ ರೈತರ ಮೇಲೆ ಶೋಷಣೆ, ವಿದ್ಯುತ್ ತೊಂದರೆ ಸರಿಪಡಿಸುವಲ್ಲಿ ವಿಳಂಬ ನೀತಿ ಸೇರಿ ಹಲವು ರೈತರ ಪ್ರಶ್ನೆಗೆ ದಾಖಲೆಗಳ ಸಹಿತವಾಗಿ ಬಹಿರಂಗ ಉತ್ತರವನ್ನು ಪ್ರತಿಭಟನೆಯ ಸಂದರ್ಭ ಅಧಿಕಾರಿಗಳು ನೀಡಬೇಕು. ನೀಡಿದ ಮಾಹಿತಿಯನ್ನು ಜಾರಿಗೆ ತರುವ ಜವಾಬ್ದಾರಿಯುತ ಅಧಿಕಾರಿಗಳು ಬರದೇ ಹೋದಲ್ಲಿ ಮೆಸ್ಕಾಂ ಕಚೇರಿಗೆ ಬೀಗ ಜಡಿದು ಉಗ್ರ ಸ್ವರೂಪದ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಎಲ್ಲಾ ವಿದ್ಯುತ್ ಗ್ರಾಹಕರು ಆಗಮಿಸಿ, ಕುಂದು ಕೊರತೆಗಳನ್ನು ನಿವಾರಿಸಿಕೊಳ್ಳಬಹುದಾಗಿದೆ. ಡಿ.16ರಂದು ಒಂದು ದಿನದ ಮಟ್ಟಿಗೆ ಗ್ರಾಹಕರು ಮೆಸ್ಕಾಂನ ಯಾವುದೇ ಬಿಲ್ ಪಾವತಿ ಮಾಡದೇ ಪ್ರತಿಭಟನೆಗೆ ಸಹಕಾರವನ್ನು ನೀಡಬೇಕೆಂದು ವಿನಂತಿಸಿದರು.
ಕಾಂಗ್ರೆಸ್ ಮುಖಂಡ ಎಂ. ಎಸ್. ಮಹಮ್ಮದ್ ಮಾತನಾಡಿ ಮೆಸ್ಕಾಂ ಎಂಬುದು ಗೊಂದಲದ ಇಲಾಖೆಯಾಗಿದೆ. ಜನರು ಎಚ್ಚರ ವಹಿಸದೇ ಗಾಢ ನಿದ್ದೆಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ರೈತ ಸಂಘ ಮುಂದೆ ಬಂದು ಪ್ರತಿಭಟನೆ ನಡೆಸಲು ಬಂದಿದೆ. ಇದಕ್ಕೆ ಜನರ ಬೆಂಬಲ ನೀಡುವ ಅಗತ್ಯವಿದೆ. ಪಕ್ಷದ ಸಂಪೂರ್ಣ ಬೆಂಬಲ ಇದೆ ಎಂದರು.
ಜಿಲ್ಲಾ ಸಂಚಾಲಕ ರೂಪೇಶ್ ರೈ ಅಲಿಮಾರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಭಟ್ ಪಾದೆಕಲ್ಲು ಉಪಸ್ಥಿತರಿದ್ದರು.

More from the blog

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...