Friday, April 12, 2024

ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘ : 55.60ಲಕ್ಷ ರೂ. ನಿವ್ವಳ ಲಾಭ

ವಿಟ್ಲ: ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ 2019-20ನೇ ಸಾಲಿನಲ್ಲಿ 128.93ಕೋಟಿ ರೂ.ಗೂ ಮಿಕ್ಕಿ ವ್ಯವಹಾರ ನಡೆಸಿದ್ದು, ಸುಮಾರು 55.60 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಸಂಘದ ಸದಸ್ಯರಿಗೆ ಶೇ.10 ಡಿವಿಡೆಂಡ್ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ ಎನ್. ಹೇಳಿದರು.
ಅವರು ಬುಧವಾರ ಸಂಘದ ಕಚೇರಿಯಲ್ಲಿ ಪ್ರಸಕ್ತ ಆರ್ಥಿಕ ವರ್ಷದ ಪ್ರಗತಿಯ ವಿವರ ನೀಡಿದರು. 2019-20ನೇ ಸಾಲಿನಲ್ಲಿ 129 ಮಂದಿ ಸದಸ್ಯರಾಗಿ ಸೇರ್ಪಡೆಯಾಗಿದ್ದು, 24.27ಲಕ್ಷ ರೂ. ಪಾಲು ಬಂಡವಾಳವಿದೆ. ಸದ್ರಿ ವರ್ಷದಲ್ಲಿ 4803 ಎ ತರಗತಿ ಸದಸ್ಯರಿದ್ದು, 2.28ಕೋಟಿ ರೂ. ಪಾಲು ಬಂಡವಾಳ ಹೊಂದಿದೆ. ಸರಕಾರದ ಬಿ ತರಗತಿಯ 81ಸಾವಿರ ರೂ ಪಾಲುಬಂಡವಾಳವಿದ್ದು, ಒಟ್ಟು 2.29ಕೋಟಿ ಪಾಲು ಬಂಡವಾಳವಿದ. 2020-20ನೇ ಸಾಲಿನಲ್ಲಿ ಒಟ್ಟು ಠೇವಣಾತಿಯು 18.69ಕೋಟಿ ರೂ.ಗಳಿವೆ ಎಂದು ತಿಳಿಸಿದರು.

ಸಂಘದ ಸದಸ್ಯರ ಅವಶ್ಯಕತೆಗೆ ಅನುಗುಣವಾಗಿ 20.58 ಕೋಟಿ ಸಾಲ ವಿತರಿಸಲಾಗಿದೆ. ಅಲ್ಪಾವಧಿ ಸಾಲವಾಗಿ ರೂ.8.87ಕೋಟಿ ರೂ., ಮಧ್ಯಮಾವಧಿ ಸಾಲವಾಗಿ ರೂ.53.93ಲಕ್ಷ ರೂ. ಸಾಲ ವಿತರಿಸಲಾಗಿದ್ದು, 2020ನೇ ಸಾಲಿನ ಮಾ.31ಕ್ಕೆ 23 ಕೋಟಿ ರೂ. ಹೊರಬಾಕಿ ಸಾಲವಿದೆ. ಸಂಘವು ವಿಟ್ಲಮುಡ್ನೂರು ಗ್ರಾಮದಲ್ಲಿ ಹೊಸ ಕಟ್ಟಡವನ್ನು ಹೊಂದಿದ್ದು, ಅಲ್ಲಿ ಪಿವಿಸಿ ಪೈಪ್ ಮತ್ತು ಕೃಷಿ ಸಲಕರಣೆಗಳ ವ್ಯಾಪಾರ ನಡೆಸುತ್ತಿದೆ. ಅದೇ ವ್ಯವಹಾರವನ್ನು ವಿಟ್ಲದ ಪ್ರಧಾನ ಕಚೇರಿಯಲ್ಲಿ ನಡೆಸಲು ಉದ್ದೇಶಿಸಲಾಗಿದೆ. ರಸಗೊಬ್ಬರ ದಾಸ್ತಾನು ಕೊಠಡಿಯು ಶಿಥಿಲಾವಸ್ಥೆಯಲ್ಲಿದ್ದು ಸುಮಾರು 45ಲಕ್ಷ ರೂ.ವೆಚ್ಚದಲ್ಲಿ ನೂತನ ದಾಸ್ತಾನು ಕೊಠಡಿ ನಿರ್ಮಾಣ ಮಾಡಲು ತೀಮಾರ್ನಿಸಲಾಗಿದೆ. ಎಸ್ಸೆಸೆಲ್ಸಿ, ಪಿಯುಸಿಯಲ್ಲಿ ಶೇ.೮೦ಕ್ಕಿಂತ ಅಂಕ ಅಂಕ ಪಡೆದ ಸದಸ್ಯರ ಮಕ್ಕಳನ್ನು ಪ್ರೋತ್ಸಾಹಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಮಹಾಬಲೇಶ್ವರ ಭಟ್ ಆಲಂಗಾರು, ನಿರ್ದೇಶಕರಾದ ಉದಯ ಕುಮಾರ್, ರಾಘವೇಂದ್ರ ಪೈ, ವಾಸು ಸಿ.ಎಚ್., ಶಿವಪ್ಪ ನಾಯ್ಕ, ಅಚ್ಯುತ ನಾಯಕ್, ಸಂಗೀತಾ ಎನ್. ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಕಲಾ ಕೆ.ಪಿ. ಉಪಸ್ಥಿತರಿದ್ದರು.

 

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...