Monday, April 8, 2024

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ: ಖಾದರ್

ವಿಟ್ಲ: ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತದಾರರು ನೀಡುವ ಪ್ರತಿಯೊಂದು ಮತವೂ ಬಿಜೆಪಿ ಸರಕಾರಕ್ಕೆ ಎಚ್ಚರಿಕೆ ಗಂಟೆಯಾಗಿದ್ದು, ರಾಜ್ಯದಲ್ಲಿ ಈ ಬಾರಿ ಹೆಚ್ಚಿನ ಬೆಂಬಲಿತ ಸದಸ್ಯರು ಜಯ ಗಳಿಸಲಿದ್ದಾರೆ ಎಂದು ಮಂಗಳೂರು ಶಾಸಕ ಯು.ಟಿ ಖಾದರ್ ತಿಳಿಸಿದರು.
ಅವರು ಬುಧವಾರ ಸಂಜೆ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿ ಸರಕಾರ ಕಳೆದ ಎರಡು ವರ್ಷಗಳಲ್ಲಿ ಬಡವರಿಗೆ ಪ್ರಯೋಜಕಾರಿಯಾಗುವ ಯಾವುದೇ ಕಾರ್ಯಕ್ರಮ ನಡೆಸಿಲ್ಲ. ಕಾಂಗ್ರೆಸ್ ಸರಕಾರ ಜಾರಿಗೆ ತಂದ ಹಲವು ಜನಪರ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿದೆ. ರೇಶನ್ ಕಾರ್ಡ್ ವಿತರಣೆಯಾಗಿಲ್ಲ. ಮನೆ ಹಸ್ತಾಂತರ ಮಾಡಿಲ್ಲ. ಪಿಂಚಣಿ ಕೂಡಾ ಬಡವರಿಗೆ ದೊರೆಯುತ್ತಿಲ್ಲ. ಮರಾಠಿ ನಿಗಮ ಸ್ಥಾಪಿಸಲು ನಮ್ಮ ವಿರೋಧವಿಲ್ಲ. ಆದರೆ ಗಡಿಭಾಗದಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಕ್ರಮ ಕೈಗೊಳ್ಳಬೇಕು. ಅದಾದ ಬಳಿಕ ನಿಗಮ ಮಂಡಳಿ ಸ್ಥಾಪನೆ ಮಾಡಲಿ ಎಂದು ಆಗ್ರಹಿಸಿದರು.
ಕೇಂದ್ರ ಸರಕಾರದಿಂದ ಬ್ಯಾಂಕ್‌ಗಳ ವಿಲೀನವಾಗಿದೆ. ಪೆಟ್ರೋಲ್, ಅಡುಗೆ ಅನಿಲ ದರ, ದಿನಸಿ ಮೊದಲಾದ ದರಗಳು ಗಗನಕ್ಕೇರಿದೆ. ಕೃಷಿ ಮಸೂದೆ ಮೂಲಕ ದೇಶದ ಬೆನ್ನುಲುಬು ರೈತರನ್ನು ಬೀದಿಪಾಲು ಮಾಡಲಾಗುತ್ತಿದೆ. ಬಿಜೆಪಿ ಸರಕಾರ ಬಂದ ಬಳಿಕ ಅದಾನಿ, ಅಂಬಾನಿಗಳಂತಹ ಕಾರ್ಪೋರೇಟ್‌ಗಳ ಆಸ್ತಿ ಹೆಚ್ಚಳವಾಗಿದೆ ಎಂದು ಹೇಳಿದರು.
ವಿಧಾನ ಪರಿಷತ್ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಕಾಂಗ್ರೆಸ್ ಪಕ್ಷ ಎಂದಿಗೂ ಗೂಂಡಾ ಪ್ರವೃತ್ತಿ ಮಾಡಿಲ್ಲ. ಇನ್ನೂ ಮಾಡುವುದಿಲ್ಲ. ಅದು ನಮ್ಮ ಸಂಸ್ಕೃತಿಯಲ್ಲ. ಕಾಂಗ್ರೆಸ್ ಆಡಳಿತ ಇದ್ದಾಗ ನಡೆಯದ ಘಟನೆ ಬಿಜೆಪಿ ಸರಕಾರ ಆಡಳಿತ ಇರುವಾಗ ನಡೆದಿದೆ. ಬಿಜೆಪಿ ಆಡಳಿತದಲ್ಲಿ ಜನರಿಗೆ ಹಾಗೂ ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲದಂತಾಗಿದೆ. ನಳಿನ್ ಕುಮಾರ್ ಕಟೀಲಿಗೆ ಕನಸಿನಲ್ಲೂ ಕಾಂಗ್ರೆಸ್ ಹೆಸರು ಬರುತ್ತಿದೆ. ಯಾವುದೇ ಘಟನೆ ನಡೆದಾಗ ಕಾಂಗ್ರೆಸ್ ಪಕ್ಷವನ್ನು ದೂರುವುದು ನಳಿನ್‌ಗೆ ಮಾಮೂಲಾಗಿದೆ ಎಂದರು. ಈಗಾಗಲೇ ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದವರಿಗೆ ಅಲ್ಲಿ ತ್ರಿಶಂಕು ಸ್ಥಿತಿ ನಿರ್ಮಾಣಗೊಂಡು ಮತ್ತೆ ನಮ್ಮ ಪಕ್ಷಕ್ಕೆ ಮರಳಲಿದ್ದಾರೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಸಲೀಂ, ಗಿರೀಶ್ ಶೆಟ್ಟಿ, ಲತೀಫ್, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್ ಮಹಮ್ಮದ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ವಿವಿಧ ವಲಯ ಕಾಂಗ್ರೆಸ್ ಅಧ್ಯಕ್ಷರು ಉಪಸ್ಥಿತರಿದರು

More from the blog

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...

ಬಂಟ್ವಾಳದ ಕುದ್ಕೋಳಿ: ಹೊತ್ತಿ ಉರಿದ ಡಸ್ಟರ್ ಕಾರು

ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಬೆಳಗ್ಗೆ (ಸೋಮವಾರ) ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಬಳಿಕ ಸ್ಥಳೀಯರು ಹಾಗೂ ಬಂಟ್ವಾಳ...