Friday, April 5, 2024

ವಿಟ್ಲ: ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿ ನೀಡಲು ಸೂಚನೆ

ವಿಟ್ಲ: ಉಚ್ಛ ನ್ಯಾಯಾಲಯದ ಆದೇಶದಂತೆ ಭಾರತ ಸಂವಿಧಾನದ ಕಲಂ 21(ಎ) ಪ್ರಕಾರ 6 ರಿಂದ 14 ವರ್ಷದ ಪ್ರತಿ ಮಗು 8 ವರ್ಷಗಳ ಶಾಲಾ ಶಿಕ್ಷಣವನ್ನು ಪಡೆಯುವುದು ಮೂಲ ಹಕ್ಕಾಗಿರುತ್ತದೆ. ಆದ್ದರಿಂದ ನಗರ ಸ್ಥಳೀಯ ಸಂಸ್ಥೆಗಳ 2020-21ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಶಾಲೆಗೆ ಹಾಜರಾಗಲು ಮತ್ತು ಶಾಲಾ ಮುಖ್ಯವಾಹಿನಿಗೆ ತರಲು ಮನೆ-ಮನೆ ಸಮೀಕ್ಷೆ ಕೈಗೊಳ್ಳಲು ಸೂಚಿಸಿರುವುದರಿಂದ ವಿಟ್ಲ ಪಟ್ಟಣ ಪಂಚಾಯತ್ ಕಛೇರಿಯ ಗುರುತು ಚೀಟಿ ಹೊಂದಿರುವ ಸಮೀಕ್ಷೆದಾರರು ಮನೆ-ಮನೆ ಸಮೀಕ್ಷೆಗೆ ತಮ್ಮ ಮನೆಗಳಿಗೆ ಭೇಟಿ ನೀಡಿದಾಗ ಅಗತ್ಯ ದಾಖಲೆಗಳೊಂದಿಗೆ ಮಾಹಿತಿ ನೀಡಬೇಕೆಂದು ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ವಿಟ್ಲ : ಮಹಿಳೆ ಆತ್ಮಹತ್ಯೆ

ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡು ನಿವಾಸಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿ.ರಾಮಣ್ಣ ನಾಯ್ಕ ಅವರ ಪತ್ನಿ ಸುಶೀಲಾ ಅವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.