Thursday, April 18, 2024

ತುರ್ತು ಚಿಕಿತ್ಸೆಗಾಗಿ ಪುತ್ತೂರಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಸಾಗಿದ ಆಂಬ್ಯುಲೆನ್ಸ್

ಪುತ್ತೂರು: ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ಶ್ವಾಸಕೋಶ ಸಂಪೂರ್ಣವಾಗಿ ಹಾನಿಯಾಗಿ ಕೃತಕ ಆಕ್ಸಿಜನ್ ನಲ್ಲಿ ಉಸಿರಾಡುತ್ತಿದ್ದು, (ಶ್ವಾಸಕೋಶದ ತುರ್ತು ಶಸ್ತ್ರಚಿಕಿತ್ಸೆಗಾಗಿ) ಶ್ವಾಸಕೋಶ ಬದಲಾವಣೆಗಾಗಿ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ವೈದೇಹಿ ಆಸ್ಪತ್ರೆಗೆ ಸಕಲೇಶಪುರದ ಅರೇಹಳ್ಳಿ ಮೂಲದ ಸುಹನಾ ಎಂಬಾಕೆಯನ್ನು ಬೆಂಗಳೂರಿನ ಇಂದು ಬೆಳಿಗ್ಗೆ 11 ಗಂಟೆಗೆ ಪುತ್ತೂರಿನಿಂದ ಬೆಂಗಳೂರಿಗೆ ಕೆ.ಎಂ.ಸಿ.ಸಿ. ಆಂಬ್ಯುಲೆನ್ಸ್ ನಲ್ಲಿ ಎಮರ್ಜೆನ್ಸಿ ಅಲರ್ಟ್ ಮೂಲಕ ಕರೆದೊಯ್ಯಲಾಯಿತು.

ಪುತ್ತೂರಿನಿಂದ ಹೊರಟ ಆಂಬ್ಯುಲೆನ್ಸ್, ಉಪ್ಪಿನಂಗಡಿ-ಗುರುವಾಯನಕೆರೆ-ಉಜಿರೆ-ಚಾರ್ಮಾಡಿ ಮಾರ್ಗವಾಗಿ ಬಂಕಲ್ ಹ್ಯಾಂಡ್ ಪೋಸ್ಟ್- ಗೋಣಿಬೀಡು-ಬೇಲೂರು-ಹಾಸನ-ಯಶವಂತಪುರ-ಹೆಬ್ಬಾಳ-ರಾಮಮೂರ್ತಿ ನಗರ-ಟಿನ್ ಫ್ಯಾಕ್ಟರಿ-ಮಹದೇವಪುರ-ವೈದೇಹಿ ಆಸ್ಪತ್ರೆ ತಲುಪಲಿದೆ.
ಆಂಬ್ಯುಲೆನ್ಸ್ ನ ಸುಗಮ ಸಂಚಾರಕ್ಕೆ ನಗರ ವ್ಯಾಪ್ತಿಯಲ್ಲಿ ಪುತ್ತೂರು ಸಂಚಾರ ಪೊಲೀಸರು ವ್ಯವಸ್ಥೆ ಮಾಡಿಕೊಟ್ಟರು. ಆಂಬ್ಯುಲೆನ್ಸ್ ಸುಗಮವಾಗಿ ಸಾಗಲು ಆಯಾಯ ಊರಿನ ನಾಗರಿಕರು ಹಾಗೂ ಸಂಘಟನೆಗಳ ಕಾರ್ಯಕರ್ತರು ಅನುವು ಮಾಡಿಕೊಟ್ಟರು.

More from the blog

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...