ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರ ಬಡಗ ಕಜೆಕಾರು ವಲಯ ಕಾಂಗ್ರೆಸ್ ಸಮಿತಿ ಇದರ ಆಶ್ರಯದಲ್ಲಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರಿಂದ ಅಭಿನಂದನಾ ಸಭೆ ನಡೆಯಿತು. ಈ ಕಾರ್ಯಕ್ರಮವನ್ನು ಮಾಜಿ ಸಚಿವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು ಹಾಗೂ ವೇದಿಕೆಯಲ್ಲಿರುವ ಎಲ್ಲಾ ಗಣ್ಯರಿಗೆ ಸ್ವಾಗತಿಸಿ ಗೌರವಿಸಲಾಯಿತು ಹಾಗೆಯೇ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ದಿಸಿದ 12 ಮಂದಿ ಸದಸ್ಯರಿಗೆ ಗೌರವಿಸಿ ಸನ್ಮಾನಿಸಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್,ಕಿಸಾನ್ ಘಟಕದ ಅಧ್ಯಕ್ಷರಾದ ಮೋಹನ್ ಗೌಡ, ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್,ಮಾಜಿ ಬ್ಲಾಕ್ ಅಧ್ಯಕ್ಷರಾದ ಮಾಯಿಲಪ್ಪ ಸಾಲಿಯಾನ್,ಜಗದೀಶ್ ಕೊಯಿಲ,ಸತೀಶ್ಚಂದ್ರ ಹೊಸಮನೆ,ಜಯ ಬಂಗೇರ ಹಾಗೂ ಡೀಕಯ್ಯ ಪೂಜಾರಿ ಕರ್ಲ, ವಸಂತ್ ಪಾಂಡವರಕಲ್ಲು, ಅಬ್ದುಲ್ ಮೊದಲಾದವರು ಉಪಸ್ಥಿತರಿದ್ದರು.