ಬಂಟ್ವಾಳ: ವಲಯ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಮಾಣಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ವಿಜೇತ ಸದಸ್ಯರಿಗೆ ಕಾರ್ಯಕರ್ತರಿಗೆ ಮತ್ತು ಮತದಾರ ಬಂಧುಗಳಿಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಅಭಿನಂದನಾ ಸಮಾರಂಭ ಕಾರ್ಯಕ್ರಮ ಮಾಣಿ ಬ್ರಹ್ಮ ಶ್ರೀ ನಾರಾಯಣ ಸಭಾ ಭವನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ,ಎಮ್ ಎಸ್ ಮೊಹಮ್ಮದ್, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ತಾಲೂಕು ಪಂಚಾಯತ್ ಸದಸ್ಯರಾದ ಮಂಜುಳಾ ಕುಶಲ ಪೆರಾಜೆ,ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ, ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು,ಮಾಣಿ ವಲಯ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ, ಮಾಣಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಕೇಶ್ ಶೆಟ್ಟಿ, ಈಶ್ವರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.