Saturday, April 6, 2024

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಳು ಸಾವು

ಬಂಟ್ವಾಳ : ಸಜೀಪಮೂಡ ಗ್ರಾಮದ ಪೆಲತ್ತಕಟ್ಟೆಯಲ್ಲಿ ಡಿಯೋ ಹಾಗೂ ಎರಡು ಆಕ್ವೀವಾ ಸ್ಕೂಟರ್‌ಗಳ ಮಧ್ಯೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಡಿಯೋ ಸವಾರ ಇಮ್ರಾನ್(21) ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಜ. 12ರಂದು ಮೃತಪಟ್ಟಿದ್ದಾರೆ.

ಇಮ್ರಾನ್ ಅವರು ಮೂಲತಃ ಕಾಸರಗೋಡಿನವರಾಗಿದ್ದು, ಬೊಳ್ಳಾಯಿಯಲ್ಲಿ ವಾಸಿಸುತ್ತಿದ್ದರು. ಅವರು ಜ. 11ರಂದು ತಮ್ಮ ಸಂಬಂಧಿಕ 12 ವರ್ಷದ ಬಾಲಕ ಮುಬಾಶಿರ್ ಅವರನ್ನು ಕರೆದುಕೊಂಡು ಸಜೀಪನಡುವಿಗೆ ಹೋಗುತ್ತಿದ್ದಾಗ ಘಟನೆ ನಡೆದಿದ್ದು, ಪ್ರಸ್ತುತ ಮುಬಾಶಿರ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಳಿದೆರಡು ಸ್ಕೂಟರ್‌ಗಳು ಸವಾರರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ತನ್ನ ಆಟೋದಲ್ಲಿ ಸಾಗಿಸಿದ್ದ ವಿಠಲ ಕಂದೂರು ಅವರು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದರು. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

More from the blog

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...