ವಿಟ್ಲ: ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿ ಫಲಾನುಭವಿಗಳಿಗೆ ನಗರ ಸ್ಥಳೀಯ ಸಂಸ್ಥೆ ಮತ್ತು ಬ್ಯಾಂಕುಗಳ ಸಂಯೋಜನೆಯೊಂದಿಗೆ ಡಿಜಿಟಲ್ ತರಬೇತಿ ವಿಶೇಷ ಅಭಿಯಾನದ ಕುರಿತು ಹಾರ್ಡಿಂಗ್ಸ್ ಮೂಲಕ ಪ್ರಚಾರ ಮಾಡುವ ಕಾರ್ಯಕ್ರಮವನ್ನು ವಿಟ್ಲ ಸರಕಾರಿ ಹಿರಿಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಭಾಭವನದಲ್ಲಿ ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಡೇನಲ್ಮ್ ಯೋಜನೆ ಅಭಿಯಾನ ವ್ಯವಸ್ಥಾಪಕರಾದ ಐರಿನ್ ರೆಬೆಲ್ಲೋ, ವಿಶ್ವನಾಥ ಹಾಗೂ ಕೆನರಾ ಬ್ಯಾಂಕ್ ವಿಟ್ಲ ಇದರ ಶಾಖಾ ವ್ಯವಸ್ಥಾಪಕರು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಮಯಂತಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಅಶೋಕ್ ಕುಮಾರ್ ಶೆಟ್ಟಿ, ಬ್ಯಾಂಕ್ ಆಫ್ ಬರೋಡ ವಿಟ್ಲ ಶಾಖೆಯ ವ್ಯವಸ್ಥಾಪಕರು ಮತ್ತು ಸಿಂಡಿಕೇಟ್ ಬ್ಯಾಂಕ್ ವಿಟ್ಲ ಶಾಖೆಯ ವ್ಯವಸ್ಥಾಪಕರು ಉಪಸ್ಥಿತರಿದ್ದರು. ವಿಟ್ಲ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ ಸ್ವಾಗತಿಸಿ, ವಂದಿಸಿದರು.
ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.