Wednesday, April 10, 2024

ಜಾನಪದ ಪ್ರಶಸ್ತಿಗೆ ಕಲ್ಲಡ್ಕ ಶಿಲ್ಪಾಗೊಂಬೆ ಬಳಗದ ಕಲಾವಿದ ಗೋಪಾಲಕೃಷ್ಣ ಬಂಗೇರ ಆಯ್ಕೆ

ಬಂಟ್ವಾಳ:  ಕರ್ನಾಟಕ ಜಾನಪದ ಅಕಾಡೆಮಿ ಕೊಡಮಾಡುವ 2020ನೇ ಸಾಲಿನ ಜಾನಪದ ಪ್ರಶಸ್ತಿಗೆ  ಕಲ್ಲಡ್ಕ ಶಿಲ್ಪಾಗೊಂಬೆ ಬಳಗದ ಕಲಾವಿದ ಗೋಪಾಲಕೃಷ್ಣ ಬಂಗೇರ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ನಿವಾಸಿಗಳಾದ ಜಾರಪ್ಪ ಪೂಜಾರಿ ಮತ್ತು ಮೋನಮ್ಮ ದಂಪತಿ ಪುತ್ರರಾದ ಗೋಪಾಲಕೃಷ್ಣ ಬಂಗೇರ ಗ್ರಾಮೀಣ ಪ್ರದೇಶದ ಸಾಹಸ ಮನರಂಜನೆಯ ಸೈಕಲ್ ಬ್ಯಾಲೆನ್ಸ್ ಮೂಲಕ ಸಾಮಾಜಿಕ ಬದುಕಿಗೆ  ಮುನ್ನುಡಿ ಬರೆದವರು. ಬಳಿಕ  ಬೆಳ್ತಂಗಡಿಯ ಶೆಟ್ಟಿ ಆರ್ಟ್ಸ್ ನಲ್ಲಿ ಕೆಲವು ವರ್ಷಗಳ ಕಾಲ ತೊಡಗಿಸಿಕೊಂಡಿದ್ದ ಇವರು ಕಳೆದ 25 ವರ್ಷಗಳಿಂದ ಕಲ್ಲಡ್ಕ ಶಿಲ್ಪಾ ಗೊಂಬೆ ಬಳಗದ  ಸಕ್ರೀಯ ಕಲಾವಿದನಾಗಿ ಸೇರಿ ಇದುವರೆಗೂ ಕೀಲು ಕುದುರೆಯ ರಾಜವೇಷಧಾರಿಯಾಗಿದ್ದಾರೆ. ಕಲೆಯಲ್ಲಿ ನಿಷ್ಠೆ, ಸೇವೆಯಲ್ಲಿ ಪ್ರಾಮಾಣಿಕತೆ, ಕರ್ತವ್ಯದಲ್ಲಿ ಬದ್ಧತೆ ಮೈಗೂಡಿಸಿಕೊಂಡು ಬಂದಿರುವ ಇವರು ತನ್ನ ವಿಶೇಷ ವೇಷಭೂಷಣ, ವಿಶಿಷ್ಟ ಶೈಲಿಯ ನಡಿಗೆ, ತಾಳಕ್ಕೆ ತಕ್ಕ ನರ್ತನದೊಂದಿಗೆ ಪಾತ್ರಕ್ಕೆ ಜೀವ ತುಂಬುತ್ತಾ, ಪ್ರೇಕ್ಷಕರ ಮನಗೆಲ್ಲುವ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಇವರು ತಂಡದೊಳಗಿನ ಕಲಾವಿದರಿಗೆ ಮಾರ್ಗದರ್ಶನವನ್ನೂ ನೀಡುತ್ತಾ ಬಂದಿದ್ದಾರೆ.

ಶಿಲ್ಪಾ ಗೊಂಬೆ ಬಳಗದ ಮೂಲಕ ಮೈಸೂರು ದಸರಾ, ಮಂಗಳೂರು ದಸರಾ, ಹಂಪಿ ಉತ್ಸವ, ವಿಶ್ವ ತುಳು ಸಮ್ಮೆಳನ, ವಿಶ್ವ ನುಡಿಸಿರಿ ವಿರಾಸತ್, ವಿಶ್ವ ಕನ್ನಡ ಸಮ್ಮೆಳನ, ವಿಶ್ವ ಕೊಂಕಣಿ ಸಮ್ಮೆಳನ, ಮುಂಬಯಿ, ಕೇರಳ ಸಹಿತ ನಾಡಿನ ನಾನಾ ಕಡೆ ನಡೆದ ಸಾವಿರಕ್ಕೂ ಮಿಕ್ಕಿ ಪ್ರದರ್ಶನಗಳಲ್ಲಿ ರಾಜವೇಷಧಾರಿಯಾಗಿ ಜನಮನ್ನಣೆ ಗಳಿಸಿದ್ದಾರೆ. ಇವರು, ರಂಗ್, ಒರಿಯರ್ದೊರಿ ಅಸಲ್ ತುಳು ಚಿತ್ರಗಳು, ಕನ್ನಡ ಧಾರಾವಾಹಿ ಸಹಿತ ಸಿನಿಮಾಗಳಲ್ಲಿ ನಡೆದ ಗೊಂಬೆ ಕುಣಿತಗಳ ಪ್ರದರ್ಶನದಲ್ಲೂ ರಾಜನಾಗಿ ಮಿಂಚಿ ಗಮನ ಸೆಳೆದಿದ್ದಾರೆ.

 

ಇಷ್ಟು ವರ್ಷಗಳ ಕಾಲ ಕಲಾ ಸೇವೆ ಮಾಡಿದ ಪ್ರತಿಫಲವಾಗಿ ಪ್ರಶಸ್ತಿ ಬಂದಿರುವುದು ಖುಷಿ ನೀಡಿದೆ. ನನ್ನನ್ನು ಸದಾ ಬೆಂಬಲಿಸಿದ ಡಾ‌.ಎಂ.ಮೋಹನ ಆಳ್ವ ಹಾಗೂ ಶಿಲ್ಪಾಗೊಂಬೆ ಬಳಗದ ರಮೇಶ್ ಕಲ್ಲಡ್ಕ ಹಾಗೂ ಗುರುತಿಸಿದ ಜಾನಪದ  ಅಕಾಡೆಮಿಗೆ ಕೃತಜ್ಞತೆ ಸಲ್ಲಿಸುತ್ತೇನೆ.

-ಗೋಪಾಲಕೃಷ್ಣ ಬಂಗೇರ

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...