ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ರಾಪ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತು, ಶಾಸಕರು ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಇವರು ಪೋಲಿಯೋ ಹನಿಯನ್ನು ಮಕ್ಕಳಿಗೆ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರಾ, ತಾ. ಪಂ. ಉಪಾಧ್ಯಕ್ಷರಾದ ಅಬ್ಬಾಸ್ ಆಲಿ, ತಾ. ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಮಲ್ಲಿಕಾ ಶೆಟ್ಟಿ, ರೋಟರಿ ಕ್ಲಬ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಡಾ|| ಪುಷ್ಪಲತಾ ಆಡಳಿತ ವೈದ್ಯಾಧಿಕಾರಿ ತಾ. ಆ. ಬಂಟ್ವಾಳ ಇವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಡಾ|| ದೀಪಾ ಪ್ರಭು, ತಾಲೂಕು ಆರೋಗ್ಯಾಧಿಕಾರಿ ಬಂಟ್ವಾಳ ಇವರು ಸ್ವಾಗತಿಸಿ ಬಂಟ್ವಾಳ ತಾಲೂಕಿನಲ್ಲಿ 0-5 ವರ್ಷದ 30352 ಮಕ್ಕಳಿಗೆ ಪೋಲಿಯೋ ಹನಿ ನೀಡಬೇಕಾಗಿದ್ದು ತಾಲೂಕಿನಾದ್ಯಂತ 190 ಬೂತ್‍ಗಳನ್ನು ತೆರೆಯಲಾಗಿದೆ. ಇದರಲ್ಲಿ 784 ಕಾರ್ಯಕರ್ತೆಯರು ಲಸಿಕಾದಾರರಾಗಿ ಭಾಗವಹಿಸಲಿದ್ದಾರೆ. ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಅಂಗನವಾಡಿ ಕೇಂದ್ರಗಳ್ಲಿ ಪೋಲಿಯೋ ಬೂತ್‍ಗಳನ್ನು ತೆರೆಯಲಾಗಿದ್ದು 0-5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ನೀಡಿಕಾರ್ಯಕ್ರಮ ಯಶಸ್ವಿಗೊಳಿಸಲು ವಿನಂತಿಸಿದರು.