ಪುತ್ತೂರು : ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯವರು ನಡೆಸಿದ 2020-21ನೇಯ ಭರತನಾಟ್ಯ ಸೀನಿಯರ್ ಪರೀಕ್ಷೆ ಯಲ್ಲಿ ಋದ್ದಿ ಎಂ.ವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆಯಾಗಿದ್ದಾರೆ.
ಇವರು ವಿಶ್ವ ಕಲಾನಿಕೇತನ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್ ಅಂಡ್ ಕಲ್ಚರಲ್ಲಿ ನೃತ್ಯ ಗುರುವಾದ ವಿದುಷಿ ನಯನ ವಿ.ರೈ ಹಾಗೂ ವಿದುಷಿ ಸ್ವಸ್ತಿಕ ಆರ್ ಶೆಟ್ಟಿ. ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10 ನೆ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ಪುತ್ತೂರಿನ ನೆಹರೂನಗರದ ಉದಯ ಲೇಔಟ್ ನಿವಾಸಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಜಯ್ ಕುಮಾರ್ ಹಾಗೂ ಶಾಂತಿ ದಂಪತಿಯ ಪುತ್ರಿ.