Friday, April 19, 2024

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆ: ಕು.ಭಾರ್ಗವಿ ಡಿಸ್ಟ್ರಿಂಕ್ಷನ್ ನಲ್ಲಿ ತೇರ್ಗಡೆ

ವಿಟ್ಲ: ಕಳೆದ 2020ರ ನವೆಂಬರ್ ನಲ್ಲಿ ನಡೆದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕು.ಭಾರ್ಗವಿ ಡಿಸ್ಟ್ರಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.

ನೃತ್ಯಗುರು, ವಿದುಷಿ ಯೋಗೀಶ್ವರಿ ಜಯಪ್ರಕಾಶ್ ರವರ ಶಿಷ್ಯೆಯಾಗಿರುವ ಭಾರ್ಗವಿ 600 ರಲ್ಲಿ 563 ಅಂಕ ಪಡೆದು ಶೇಕಡಾ 93.8 ಫಲಿತಾಂಶ ದಾಖಲಿಸಿದ್ದಾಳೆ. ವಿಟ್ಲದಲ್ಲಿರುವ ವಿಠಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿ ಕಲಿಯುತ್ತಿರುವ ಈಕೆ, ಸಂಗೀತ, ಯಕ್ಷಗಾನ, ಭಾಷಣ ಹಾಗೂ ಮಾತುಗಾರಿಕೆಯಲ್ಲಿ ಮುಂಚೂಣಿಯಲ್ಲಿದ್ದಾಳೆ. ಈಕೆ ಯಕ್ಷಗಾನ ಕಲಾವಿದ ಶಿವಪ್ಪ ಜೋಗಿ ಬಾಯಾರು ಹಾಗೂ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಕಿ ಕುಸುಮ ದಂಪತಿಯ ಪುತ್ರಿ.

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...