ಬಂಟ್ವಾಳ : ಮಾಜಿ ಸಚಿವರಾದ ಬಿ.ರಮಾನಾಥ ರೈ ರವರ ನೇತೃತ್ವದ ನಿಯೋಗ ಮಾನ್ಯ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರನ್ನು ಭೇಟಿ ನೀಡಿ ಜಿಲ್ಲೆಯ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.



ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮಹಮ್ಮದ್, ಪದ್ಮಶೇಖರ್ ಜೈನ್, ಮಹಾನಗರ ಪಾಲಿಕೆ ಸದಸ್ಯರಾದ ಭಾಸ್ಕರ್ ಮೊಯಿಲಿ,ರವೂಫ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಮಾಯಿಲಪ್ಪ ಸಾಲಿಯಾನ್, ಜಗದೀಶ್ ಕೊಯಿಲ,ಸಚಿನ್ ರಾಜ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು