ಬಂಟ್ವಾಳ: ಬಂಟ್ವಾಳ ತಾಲೂಕಿನ ಕರಿಂಗಾಣ ಗ್ರಾಮದ ಅನಿತಾ ಡಿ’ಕುನ್ನಾ ಇವರ ಮನೆ ಬೆಂಕಿಗೆ ಹಾನಿಗೊಳಗಾಗಿದ್ದು ಈ ಸ್ಥಳಕ್ಕೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ *ಬಿ. ರಮಾನಾಥ ರೈ ಯವರು* ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ವಲಯ ಅಧ್ಯಕ್ಷರಾದ ರಾಘವ ಪೂಜಾರಿ, ಚಂದ್ರಶೇಖರ ಶೆಟ್ಟಿ, ಮಾಜಿ ಪಂಚಾಯತ್ ಸದಸ್ಯರಾದ ಮಹಮ್ಮದ್ ಅಮ್ಟೂರು ಮೊದಲಾದವರು ಉಪಸ್ಥಿತರಿದ್ದರು ಅದೇ ಸಂದರ್ಭದಲ್ಲಿ ರಸ್ತೆ ಅಪಘಾತಕ್ಕೀಡಾಗಿ ಗಾಯಗೊಂಡಿರುವ ಭೋಜರಾಜ್ ಕರಿಂಗಾಣ ಇವರ ಮನೆಗೆ ಮಾಜಿ ಸಚಿವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.