ಬಂಟ್ವಾಳ : ಬಳಯೂರು ಸರಪಾಡಿ ಶ್ರೀ ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಸೇವಾ ಸಮಿತಿ ಇದರ ದ್ವಿತೀಯ ವರ್ಷದ ನೇಮೋತ್ಸವಕ್ಕೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್,ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಸಪ್ನ ವಿಶ್ವನಾಥ್ ಪೂಜಾರಿ, ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಶ್ರೀಮತಿ ಕುಸುಮ ಚಂದ್ರಹಾಸ ನಾಯ್ಕ್ ,ಬಾಲಕೃಷ್ಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.