Sunday, April 7, 2024

ತುಂಬೆಯಲ್ಲಿ ಕನ್ನಡ ಶಿಕ್ಷಕರಾದ ರಾಜ ಶೆಟ್ಟಿಯವರಿಗೆ ಬೀಳ್ಕೊಡುಗೆ

ಬಂಟ್ವಾಳ : ಇವತ್ತು ನಿವೃತ್ತಿ ಹೊಂದುತ್ತಿರುವ ಶಿಕ್ಷಕ ರಾಜ ಶೆಟ್ಟಿ ಓರ್ವ ಉತ್ತಮ ಶಿಕ್ಷಕರಾಗಿದ್ದರು. ಒಳ್ಳೆಯ ಚಿಂತನೆ, ಪಾಠ ಪ್ರವಚನ ಹಾಗೂ ಬೊಧನೆಯಿಂದ ವಿದ್ಯಾರ್ಥಿಗಳ ಮನಸ್ಸನ್ನು ಗೆದ್ದಿದ್ದಾರೆ. ಇಂದು ಅವರು ನಿವೃತ್ತರಾದರೂ, ಭವಿಷ್ಯತ್ತಿನಲ್ಲಿ ಅವರ ಸೇವೆಯು ಶಿಕ್ಷಣ ಕ್ಷೇತ್ರ ಹಾಗೂ ಸಮಾಜಕ್ಕೆ ಲಭ್ಯವಾಗಬೇಕಿದೆ. ಈ ನಿಟ್ಟಿನಲ್ಲಿ ಅವರಿಗೆ ಯಶಸ್ಸು ಲಭಿಸಲಿ ಎಂಬುದಾಗಿ ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್‍ನ ಅಧ್ಯಕ್ಷರಾದ ಬಿ. ಅಬ್ದುಲ್ ಸಲಾಂ ಅವರು ಹೇಳಿದರು.

ಅವರು ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ, ರಕ್ಷಕ ವೃಂದ, ವಿದ್ಯಾರ್ಥಿ ವೃಂದ ಹಾಗೂ ಊರಿನವರು ಏರ್ಪಡಿಸಿದ್ದ ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತುಂಬೆ ಪ್ರೌಢಶಾಲೆಯ ವಿಭಾಗದಿಂದ ವಯೋನಿವೃತ್ತಿ ಹೊಂದಿದ ಶಿಕ್ಷಕ ರಾಜ ಶೆಟ್ಟಿ ಮಾತನಾಡಿ ತನ್ನ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞನಾಗಿದ್ದೇನೆ ಎಂದರು.

ವಿದಾಯ ಕೂಟದಲ್ಲಿ ತುಂಬೆ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ  ದಿನೇಶ ಶೆಟ್ಟಿ ಅಳಿಕೆ ಅವರು ದಿಕ್ಸೂಚಿ ಮಾತುಗಳೊಂದಿಗೆ ಅಭಿನಂದಿಸಿ ಮಾತನಾಡಿ ಅಧ್ಯಾಪಕನು ಅಧ್ಯಾಪನ  ಮಾಡುವ ವ್ಯಕ್ತಿಯೂ ಆಗಿರಬೇಕು. ಅಂಥವರು ಒಳ್ಳೆಯ ಶಿಕ್ಷಕರಾಗುತ್ತಾರೆ. ಮನಸ್ಸು ಮಲಿನತೆಯಿಂದ ಇದ್ದಾಗ ಮಾತ್ರ ವೃದ್ಧಾಪ್ಯ ಎದ್ದು ಕಾಣುತ್ತದೆ. ಈ ನಿಟ್ಟಿನಲ್ಲಿ ಇವತ್ತು ಬೀಳ್ಕೊಡುತ್ತಿರುವ ಶಿಕ್ಷಕ ರಾಜ ಶೆಟ್ಟಿ ತನ್ನ ಸಂಯಮ, ಕ್ರಿಯಾಶೀಲತೆ, ವಿದ್ಯಾರ್ಥಿಗಳೊಂದಿಗೆ ಇರಿಸಿಕೊಂಡಿರುವ ಒಳ್ಳೆಯ ಸಂಪರ್ಕವೇ ಮೊದಲಾದ ಲವಲವಿಕೆಯ ಚಟುವಟಿಕೆಯಿಂದ ತೇಜಸ್ಸಿನಿಂದ ಯುವಕರಂತೆಯೇ ಕಂಗೊಳಿಸಲು ಸಾಧ್ಯವಾಗಿದೆ ಎಂದರು.

ಸಮಾರಂಭದಲ್ಲಿ ತುಂಬೆ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ  ಶ್ರೀನಿವಾಸ ಕೆದಿಲ, ತುಂಬೆ ಬಿ.ಎ. ಐ.ಟಿ.ಐ.ಯ ಪ್ರಾಂಶುಪಾಲರಾದ  ನವೀನ್ ಕುಮಾರ್, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಬಶೀರ್ ತಂಡೇಲ್ ಮುಂತಾದವರು ಅಭಿನಂದಿಸಿ ಮಾತನಾಡಿದರು.

ಟ್ರಸ್ಟ್ ಹಾಗೂ ಸಂಸ್ಥೆಯ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ ರಾಜ ಶೆಟ್ಟಿ ಅವರು ತನ್ನ ಸೇವಾವಧಿಯಲ್ಲಿ ಸಹಕರಿಸಿದ ಸಹೋದ್ಯೋಗಿಗಳಿಗೆ ಕೃತಜ್ಞತೆ ಸಮರ್ಪಿಸಿದರು. ವಿದ್ಯಾರ್ಥಿನಿ  ಲಿಖಿತಾ ವಿದ್ಯಾರ್ಥಿ ವೃಂದದ ಪರವಾಗಿ ಗುರುವಂದನೆ ಸಮರ್ಪಿಸಿದರು. ಶಿಕ್ಷಕಿ ವಿದ್ಯಾ ಹಾಗೂ ತಂಡದವರಿಂದ ಸಾಂಪ್ರದಾಯಿಕವಾಗಿ ಆರತಿ ಬೆಳಗುವ ಕಾರ್ಯಕ್ರಮ ನಡೆಯಿತು.

ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳಾದ ಉಪಾಧ್ಯಕ್ಷ ನಿಸಾರ್ ಅಹಮ್ಮದ್, ಕಮಿಟಿ ಸದಸ್ಯ ಮ್ಯಾಕ್ಷಿಂ ಕುವೆಲ್ಲೊ, ರಾಜ ಶೆಟ್ಟಿ ಸಹಧರ್ಮಿಣಿ ರೇಖಾ ಶೆಟ್ಟಿ ಉಪಸ್ಥಿತರಿದ್ದ ಸಮಾರಂಭದಲ್ಲಿ ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ  ಕೆ. ಎನ್. ಗಂಗಾಧರ ಆಳ್ವರವರು ಸ್ವಾಗತದೊಂದಿಗೆ ಪ್ರಸ್ತಾವನೆಗೈದು ಮಾತನಾಡಿದರು. ಶಿಕ್ಷಕಿ ಪ್ರತಿಮಾ ಮತ್ತು ಬಳಗದವರು ಪ್ರಾರ್ಥನೆಗೈದರು. ಪ್ರೌಢಶಾಲಾ ವಿದ್ಯಾರ್ಥಿನಿಯರು ಶುಭಾಶಯ ಗೀತೆ ಹಾಡಿದರು. ಕಛೇರಿ ಅಧೀಕ್ಷಕ  ಅಬ್ದುಲ್ ಕಬೀರ್ ಬಿ. ವಂದಿಸಿ, ದೈಹಿಕ ಶಿಕ್ಷಣ ಶಿಕ್ಷಕ  ಜಗದೀಶ ರೈ ಬಿ. ಕಾರ್ಯಕ್ರಮ ನಿರೂಪಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...