ಬಂಟ್ವಾಳ: ವಿದ್ಯಾರ್ಥಿ ಒಕ್ಕೂಟ ಬಂಟ್ವಾಳ ಘಟಕ ವತಿಯಿಂದ ಬಸ್ ಪಾಸ್ ವಿಳಂಬ ಮತ್ತು ಅವ್ಯವಸ್ಥೆನೀತಿಯನ್ನು ಖಂಡಿಸಿ ಬಿ.ಸಿ.ರೋಡ್ ನ KSRTC ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಒಕ್ಕೂಟ, ಬಂಟ್ವಾಳ ಘಟಕದ ಅಧ್ಯಕ್ಷರಾದ ಇಸ್ರಾರ್ ಗೂಡಿನಬಳಿ ಅವರು ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳ ಬಸ್ ಪಾಸ್ ಸಮಸ್ಯೆಯನ್ನು ಕೂಡಲೇ ಪರಿಹರಿಸದಿದ್ದಲ್ಲಿ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಇದರ ಮಧ್ಯೆ ಪ್ರತಿಭಟನೆಯನ್ನು ಕಂಡು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ ವಿದ್ಯಾರ್ಥಿ ಸಮಸ್ಯೆಗಳನ್ನು ತಿಳಿದು ವಿದ್ಯಾರ್ಥಿ ಸಮಸ್ಯೆಗಳನ್ನು ಈ ಕೂಡಲೇ ಪರಿಹರಿಸಬೇಕೆಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ NSUI RTI ಸೆಲ್ ನ ರಾಷ್ಟ್ರೀಯ ಸಂಚಾಲಕರಾದ ಅನ್ವಿತ್ ಕಟೀಲ್, ವಿದ್ಯಾರ್ಥಿ ಒಕ್ಕೂಟ ಬಂಟ್ವಾಳ ಘಟಕದ ಅಧ್ಯಕ್ಷರಾದ ಇಸ್ರಾರ್ ಗೂಡಿನಬಳಿ, NSUI ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಿನಯ್ ಕುಮಾರ್ ಸಿಂಧ್ಯಾ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಮುಹಮ್ಮದ್ ಶಫೀಕ್, ಸಂಯೋಜಕ ನಜೀಬ್ ಮಂಚಿ, ಅಫ್ತಾಭ್ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.