ಬಂಟ್ವಾಳ: ಬಿಜೆಪಿಯ ಭದ್ರಕೋಟೆಯಾಗಿರುವ ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮಪಂಚಾಯತ್ ವ್ಯಾಪ್ತಿಯ ಮಾಡ ಪಲ್ಕೆ ಎಂಬಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಹಲವಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಇಂದು ಮಾಜಿ ಸಚಿವರಾದ ಬಿ. ರಮಾನಾಥ ರೈ ಹಾಗೂ ವಿಧಾನಪರಿಷತ್ ಸದಸ್ಯರಾದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.


