Tuesday, October 31, 2023

ದಕ್ಷಿಣ ಕನ್ನಡ ಜಿಲ್ಲೆಗೆ ಕೇರಳದ ಕೋಳಿ ಸಾಗಣೆ ನಿರ್ಬಂಧ: ಜಿಲ್ಲಾಧಿಕಾರಿ ಸೂಚನೆ

Must read

ಮಂಗಳೂರು: ಹಕ್ಕಿ ಜ್ವರ ರೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರೊಂದಿಗೆ ರೋಗ ಹರಡದಂತೆ ಅಗತ್ಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ದ. ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋಳಿಜ್ವರ ರೋಗದ ಹರಡುವಿಕೆ ನಿಯಂತ್ರಣ ಕುರಿತ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲೆಗೆ ಕೇರಳ ರಾಜ್ಯದಿಂದ ಬರುವ ಎಲ್ಲಾ ರೀತಿಯ ಕುಕ್ಕುಟ ಮತ್ತು ಕುಕ್ಕುಟ ಉತ್ಪನ್ನಗಳ ಸಾಗಾಣಿಕೆಯನ್ನು ನಿರ್ಬಂಧಿಸಬೇಕು ಎಂದಿರುವ ಅವರು, ಕೇರಳ ರಾಜ್ಯಕ್ಕೆ ಜಿಲ್ಲೆಯಿಂದ ರವಾನಿಸುವ ಕುಕ್ಕುಟ ಹಾಗೂ ಕುಕ್ಕುಟ ಉತ್ಪನ್ನಗಳ ವಾಹನಗಳನ್ನು ರಾಜ್ಯ ಮಟ್ಟದ ಗಡಿ ಭಾಗದಲ್ಲಿ ನಂಜು ನಾಶಕ ಔಷಧ ಸಿಂಪಡಿಸಬೇಕು ಎಂದರು.

ಕೇರಳ ರಾಜ್ಯದ ಕೊಟ್ಟಾಯಂ ಮತ್ತು ಅಲಪ್ಪುಳ ಜಿಲ್ಲೆಯಲ್ಲಿ ಬಾತುಕೋಳಿಗಳಲ್ಲಿ ಕೋಳಿ ಶೀತ ಹಕ್ಕಿಜ್ವರ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಈ ರೋಗ ಹರಡುವ ಸಾಧ್ಯತೆ ಇರುವುದರಿಂದ ಇದರ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ಎಲ್ಲಾ ಕುಕ್ಕುಟ ಕ್ಷೇತ್ರಗಳಲ್ಲಿ ವಿಶೇಷವಾಗಿ ಪಕ್ಷಿಧಾಮ, ನೀರು ಸಂಗ್ರಹ ಸ್ಥಳಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು, ಕೋಳಿ ಫಾರಂಗಳಲ್ಲಿ ಸ್ವಚ್ಛತೆಗೆ ಮಾಲೀಕರು ಅಗತ್ಯ ಕ್ರಮ ವಹಿಸುವುದರ ಜೊತೆಗೆ ಅನಗತ್ಯವಾಗಿ ಜನರ ಓಡಾಟವನ್ನು ನಿರ್ಬಂಧಿಸಬೇಕು ಎಂದರು.

ಕೋಳಿಗಳಲ್ಲಿ ಯಾವುದೇ ರೀತಿಯ ಅಸಹಜ ಸಾವು ಹಾಗೂ ಹಕ್ಕಿಜ್ವರಗಳ ಲಕ್ಷಣ ಕಂಡು ಬಂದಲ್ಲಿ ತಕ್ಷಣವೇ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು ಎಂದರು.

ಆ ರೋಗದ ಪರಿಶೀಲನೆ ಮತ್ತು ರೋಗದ ಕಣ್ಗಾವಲನ್ನು ನಿಗಾ ವಹಿಸಲು ಜಿಲ್ಲೆಯಲ್ಲಿರುವ ಕೋಳಿ ಫಾರಂಗೆ ಪಶುಪಾಲನಾಧೀಕಾರಿಗಳು ಆಗ್ಗಿಂದ್ದಾಗೆ ಭೇಟಿ ನೀಡಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಪಶು ಇಲಾಖೆಯ ಉಪನಿರ್ದೇಶಕ ಪ್ರಸನ್ನಕುಮಾರ್ , ಪ್ರಾದೇಶಿಕ ಸಂಶೋಧನಾ ಅಧಿಕಾರಿ ವಸಂತ ಶೆಟ್ಟಿ ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

More articles

Latest article