ಬಂಟ್ವಾಳ: ಶ್ರೀರಾಮ ಪದವಿ ಮಹಾವಿದ್ಯಾಲಯದಲ್ಲಿ 2020-21ನೇ ಸಾಲಿನ ಪ್ರದೀಪ ಸಾಂಸ್ಕೃತಿಕ ಸಂಘದ ಉದ್ಘಾಟನಾ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ 26 ಮಂಗಳವಾರ ಬೆಳಗ್ಗೆ 10ಕ್ಕೆ ಕಾಲೇಜಿನ ಅಜಿತಕುಮಾರ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪ್ರಸಿದ್ಧ ಯಕ್ಷಗಾನ ಹಾಸ್ಯ ಕಲಾವಿದರಾದ ಶ್ರೀ ದಿನೇಶ್ ಕೋಡಪದವು ಇವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ ಆಗಮಿಸಲಿದ್ದಾರೆ. ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಾಗೇಶ್ ಇರಾ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಉಪಸ್ಥಿತರಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


